ಮಕ್ಕಳ ಮೇಲೆ ಅತ್ಯಾಚಾರವೆಸಗಿದರೆ ಗಲ್ಲುಶಿಕ್ಷೆ: ಒಪ್ಪಿಗೆ ನೀಡಿದ ಕೇಂದ್ರ ಸಚಿವ ಸಂಪುಟ!

ನ್ಯೂಸ್ ಕನ್ನಡ ವರದಿ-(21.04.18): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟವು ಮಕ್ಕಳ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲುಶಿಕ್ಷೆ ನೀಡುವ ಕಾನೂನಿಗೆ ಅನುಮೋದನೆ ನಿಡಿದೆ ಎಂದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಪುಟ್ಟ ಮಕ್ಕಳ ಮೇಲೆ ಅತ್ಯಾಚಾರವೆಸಗುವ ಪ್ರಕರಣಗಳು ಗಣನೀಯವಾಗು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟವು ಸುಗ್ರೀವಾಜ್ಞೆಗೆ ತಿದ್ದುಪಡಿ ತರಲು ಒಪ್ಪಿಗೆ ನೀಡಿದೆ.

ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಸಂಬಂಧ ಶನಿವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಯಿತು. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. 16 ವರ್ಷ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಜೀವಾವಧಿ ಶಿಕ್ಷೆ ಶಿಕ್ಷೆ ವಿಧಿಸಲು ಅನುಮತಿ ನೀಡಲಾಗಿದೆ.

Leave a Reply

Your email address will not be published. Required fields are marked *