ಬಿಜೆಪಿ ಪಕ್ಷವನ್ನು ತೊರೆದು ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಬೇಳೂರು ಗೋಪಾಲಕೃಷ್ಣ!
ನ್ಯೂಸ್ ಕನ್ನಡ ವರದಿ(21-04-2018): ತನಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ಬಿಜೆಪಿಯೊಂದಿಗೆ ಮುನಿಸಿಕೊಂಡಿರುವ ಬೇಳೂರು ಗೋಪಾಲಕೃಷ್ಣ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.
ಈ ಕುರಿತು ಸಿಎಂ ಸಿದ್ಧರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದರು. ಸಿಎಂ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಸೇರ್ಪಡೆಗೆ ಹಸಿರು ನಿಶಾನೆ ತೋರಿಸಿದ್ದು, ಬೇಳೂರು ಗೋಪಾಲಕೃಷ್ಣ, ನಾಳೆ ಕಾಂಗ್ರೆಸ್ ಸೇರಲಿರುವುದಾಗಿ ತಿಳಿದು ಬಂದಿದೆ.
2004 ಹಾಗೂ 2008ರ ವಿಧಾನ ಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಸ್ಪರ್ಧಿಸಿ ತನ್ನ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರನ್ನು ಸೋಲಿಸಿದ್ದ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಈ ಬಾರಿ ತನ್ನ ಸೋದರ ಮಾವನ ಕೈಹಿಡಿದು ಗೆಲುವಿಗೆ ಶ್ರಮಿಸಲಿದ್ದಾರೆ.