ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ: ಕೆ.ಸಿ ವೇಣುಗೋಪಾಲ್ ವ್ಯಂಗ್ಯ

ನ್ಯೂಸ್ ಕನ್ನಡ ವರದಿ-(22.04.18): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕರ್ನಾಟಕದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದಾರೆಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವ್ಯಂಗ್ಯವಾಡಿದ್ದಾರೆ. ಚುನಾವಣೆ ಪ್ರಚಾರಕ್ಕಾಗಿ “ಸಿಎಂ ಟಾಕ್ಸ್‌’ ಎಂಬ ವಿನೂತನ ಆ್ಯಪ್‌ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಮಿತ್‌ ಶಾ ರಾಜ್ಯ ಪ್ರವಾಸದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಸತ್ಯ ಹೇಳುತ್ತಿದ್ದಾರೆಂದು ಲೇವಡಿ ಮಾಡಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿದರೆ ಅವರಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ರಾಜ್ಯ ಸರ್ಕಾರ ಕಳೆದ 5 ವರ್ಷದಲ್ಲಿ ಶೇ.95ರಷ್ಟು ಭರವಸೆಗಳನ್ನು ಈಡೇರಿಸಿದೆ. ಬಿಜೆಪಿ ನಾಯಕರು ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಚುನಾವಣೆಗೆ
ಬರಲಿ ಎಂದರು.

ಬಿಜೆಪಿ ನಾಯಕರು ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತದೆಂಬ ವಿಶ್ವಾಸದಲ್ಲಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ 130 ಸ್ಥಾನಗಳನ್ನು ಗೆಲ್ಲಲಿದೆ. ಕೆಲವು ಸಮೀಕ್ಷೆಗಳು ಕಾಂಗ್ರೆಸ್‌ ಪರ ಬಂದಿದ್ದರೆ, ಕೆಲವು ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ಬಂದಿದೆ. ನಾನು ಸಮೀಕ್ಷೆಗಳನ್ನು ನಂಬುವುದಿಲ್ಲ. ಜನರ ಭಾವನೆಗಳನ್ನು ಅರಿತಿದ್ದೇನೆ. ರಾಜ್ಯದ ಜನತೆ ಕಾಂಗ್ರೆಸ್‌ ಪರವಾಗಿದ್ದಾರೆ ಎಂದರು.

Leave a Reply

Your email address will not be published. Required fields are marked *