ಕಾವೇರಿ ನಿರ್ವಹಣಾ ಮಂಡಳಿಯ ರಚನೆಯನ್ನು ಕರ್ನಾಟಕವು ಬಲವಾಗಿ ವಿರೋಧಿಸುತ್ತದೆ: ಪ್ರಧಾನಿಗೆ ಪತ್ರ ಬರೆದ ಸಿದ್ಧರಾಮಯ್ಯ

ನ್ಯೂಸ್ ಕನ್ನಡ ವರದಿ(22-04-2018): ಪ್ರಧಾನ ಮಂತ್ರಿ ನರೇಂದ್ರ ಮೋದಿ ರಚಿಸಲುವ ಉದ್ದೇಶಿಸಿರುವ ಕಾವೇರಿ ನಿರ್ವಹಣಾ ಮಂಡಳಿಯ ರಚನೆಯನ್ನು ಕರ್ನಾಟಕವು ಬಲವಾಗಿ ವಿರೋಧಿಸುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿಯ ರಚನೆಯು ಅಸಾಂವಿಧಾನಿಕವಾಗಿದ್ದು, ಸುಪ್ರೀಂ ಕೋರ್ಟು ಅಂತಹ ಯಾವುದೇ ಮಂಡಳಿ ರಚನೆಗೆ ಅವಕಾಶ ನೀಡಲಿಲ್ಲ ಎಂದು ಪತ್ರದಲ್ಲಿ ಬರೆದಿರುವ ಸಿದ್ಧರಾಮಯ್ಯ ತಾನು ಆದಷ್ಟು ಬೇಗ ಪ್ರಧಾನಿಯವರನ್ನು ಭೇಟಿ ಮಾಡಲು ಉದ್ದೇಶಿಸಿರುವುದಾಗಿ ಪತ್ರದಲ್ಲಿ ಉಲ್ಲೇಖಿದ್ದಾರೆ.

ದಿನೇ ದಿನೇ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳ ಕಾವೇರಿ ನೀರಿಗಾಗಿರುವ ಕಾದಾಟವು ಕೇಂದ್ರ ಸರಕಾರಕ್ಕೆ ನುಂಗಲಾರದ ತುತ್ತಾಗಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿಯ ರಚನೆಗೆ ಕೇಂದ್ರ ಸರಕಾರ ಮುಂದಾಗಿತ್ತು.

Leave a Reply

Your email address will not be published. Required fields are marked *