ಸಿದ್ಧರಾಮಯ್ಯ ವಿರುದ್ಧ ಬಾದಾಮಿಯಲ್ಲಿ ಸ್ಪರ್ಧಿಸಲು ನಾನು ಸಿದ್ಧ: ಯಡಿಯೂರಪ್ಪ!
ನ್ಯೂಸ್ ಕನ್ನಡ ವರದಿ(22-04-2018): ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸುವುದು ಖಚಿತವಾಗುತ್ತಿದ್ದಂತೆ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೈಕಮಾಂಡ್ ಸೂಚಿಸಿದರೆ ನಾನು ಬಾದಾಮಿಯಲ್ಲಿ ಸ್ಪರ್ಧಿಸಲು ಸಿದ್ದನಿರುವುದಾಗಿ ಹೇಳಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟನಾಗಿದ್ದು, ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲೂ ಸೋಲಿಸುವುದು ನಮ್ಮ ಗುರಿಯಾಗಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತ ಎಂದರು.
ನಾನು ಬಾದಾಮಿಯಲ್ಲಿ ಸಿಎಂ ವಿರುದ್ಧ ಸ್ಪರ್ಧಿಸಲು ಸಿದ್ದನಿರುವಾಗಿ ಸಂಸದ ಶ್ರೀರಾಮುಲು ಘೋಷಿಸಿದ ಬೆನ್ನಲ್ಲೇ ಯಡಿಯೂರಪ್ಪನರವರ ಈ ಹೇಳಿಕೆ ಹೊರಬಿದ್ದಿದೆ.