ಬಿಜೆಪಿಯ ತತ್ವ ಸಿದ್ಧಾಂತಗಳೆಲ್ಲಾ ಬೋಗಸ್ ಎಂದು ಕಾಂಗ್ರೆಸ್ ಸೇರಿದ ಬೇಳೂರು ಗೋಪಾಲಕೃಷ್ಣ!

ನ್ಯೂಸ್ ಕನ್ನಡ ವರದಿ-(22.04.18): ಕರ್ನಾಟಕದಲ್ಲಿ ಮೇ12ರಂದು ವಿಧಾನಸಭಾ ಚುನಾವಣೆಯು ನಡೆಯಲಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಬಿಜೆಪಿ ಪಕ್ಷದಲ್ಲಿ ಚುನಾವಣಾ ಟಿಕೆಟ್ ಸಿಗದ ಕಾರಣ ಮಾಜಿ ಬಿಜೆಪಿ ಮುಖಂಡ ಬೇಳೂರು ಗೋಪಾಲಕೃಷ್ಣ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಧ್ವಜ ನೀಡುವ ಮೂಲಕ ಬರ ಮಾಡಿಕೊಂಡರು.

ಬಳಿಕ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳೆಲ್ಲಾ ಬರೀ ಬೋಗಸ್ ಮಾತ್ರ. ಆ ಪಕ್ಷದಲ್ಲಿ ನಾನು ಸಾಕಷ್ಟು ನೋವನ್ನು ಅನುಭವಿಸಿದ್ದೇನೆ. ನಾನು ಮತ್ತು ನನ್ನ ಸೋದರ ಮಾವ ಕಾಗೋಡು ತಿಮ್ಮಪ್ಪ ಒಂದಾಗುವ ಸಂದರ್ಭ ಈಗ ಕೂಡಿ ಬಂದಿದೆ. ನಾವಿಬ್ಬರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತೇವೆ. ಬಿಜೆಪಿಗೆ ಜೈಲಿಗೆ ಹೋಗಲು ಮಾತ್ರ ಬಿಲ್ಲವರು ಬೇಕು, ಅಧಿಕಾರ ಮಾಡುವುದು ಬೇರೆಯವರು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Leave a Reply

Your email address will not be published. Required fields are marked *