ನನಗೆ ಸಂಸತ್ತಿನಲ್ಲಿ 15ನಿಮಿಷ ಮಾತನಾಡಲು ಅವಕಾಶ ನೀಡಿದ್ರೆ ಮೋದಿ ಓಡಿ ಹೋಗ್ತಿದ್ರು!: ರಾಹುಲ್ ಗಾಂಧಿ
ನ್ಯೂಸ್ ಕನ್ನಡ ವರದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವದ ಅಂಗ ಸಂಸ್ಥೆಗಳ ಕಾರ್ಯ ವೈಖರಿಯನ್ನು ಹಾಳುಗೆಡವುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶ ಹೊತ್ತಿ ಉರಿದರೂ ಮತ್ತು ಮಹಿಳೆಯರು ಅತ್ಯಾಚಾರಕ್ಕೆ ಒಳಗಾದರೂ ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಕ್ಕಿಂತ ಮತ್ತೆ ಪ್ರಧಾನಿಯಾಗಬೇಕೆಂಬುದು ಮೋದಿಯವರ ಬಯಕೆಯಾಗಿದೆ ಎಂದು ರಾಹುಲ್ ಟೀಕಿಸಿದ್ದಾರೆ.
ದೆಹಲಿಯಲ್ಲಿಂದು ಸಂವಿಧಾನ ಉಳಿಸಿ ರಾಷ್ಟ್ರವ್ಯಾಪಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಎಸ್ಎಸ್ ಮೊದಲಿನಿಂದಲೂ ಪ್ರಜಾಪ್ರಭುತ್ವದ ಪ್ರತಿಯೊಂದು ಅಂಗ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಲೇ ಬಂದಿವೆ ಎಂದು ಆರೋಪಿಸಿದರು. ಸಂಸತ್ನಲ್ಲಿ ನನಗೆ ಮಾತನಾಡಲು ಕೇವಲ 15 ನಿಮಿಷಗಳ ಅವಕಾಶ ದೊರೆತಿದ್ದರೆ ಮೋದಿಯವರು ಓಡಿ ಹೋಗುತ್ತಿದ್ದರು ಎಂದು ರಾಹುಲ್ ಹೇಳಿದ್ದಾರೆ.