ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್, ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ವಿರುದ್ಧ ದೂರು ದಾಖಲು!

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ಉದ್ದೇಶದಿಂದ ತಮ್ಮ ಶಕ್ತಿ ಪ್ರದರ್ಶನ ಈಗಾಗಲೇ ನಡೆಸುತ್ತಿದ್ದಾರೆ, ಕರ್ನಾಟಕದ ಚುನಾವಣೆ ರಾಷ್ಟ್ರ ಮಟ್ಟದಲ್ಲೇ ಸದ್ದು ಮಾಡುತ್ತಿದೆ. ಇದೇ ಸಂಧರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏ. 20ರಂದು ಬಿ.ಸಿ.ರಸ್ತೆ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಕ್ಯಾ. ಗಣೇಶ್ ಕಾರ್ಣಿಕ್, ಹರಿಕೃಷ್ಣ ಬಂಟ್ವಾಳ್ ತಮ್ಮ ಭಾಷಣದಲ್ಲಿ ರೈ ಅವರನ್ನು ವೈಯಕ್ತಿಕವಾಗಿ ನಿಂದಿಸುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿಸಂಹಿತೆ ಉಲ್ಲಂಘನಾ ಕಣ್ಗಾವಲು ಅಧಿಕಾರಿ ಅಬ್ದುಲ್ ರಝಾಕ್ ಅವರು ಈ ಬಗ್ಗೆ ದೂರು ನೀಡಿದ್ದು, ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *