ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆಲ್ಲಾ ಉಚಿತ ಸ್ಮಾರ್ಟ್ ಫೋನ್!
ನ್ಯೂಸ್ ಕನ್ನಡ ವರದಿ-(27.04.18): ಕರ್ನಾಟಕದಲ್ಲಿ ಮೇ 12ರಂದು ವಿಧಾನಸಭಾ ಚುನಾವಣೆಯು ಪ್ರಾರಂಭವಾಗಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದೀಗ ಇಂದು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯ ಪ್ರಕಾರ ಕರ್ನಾಟಕದಲ್ಲಿ 18ರಿಂದ 23 ವಯಸ್ಸಿನ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ಫೋನ್ ವಿತರಿಸುವ ಕುರಿತು ಉಲ್ಲೇಖಿಸಲಾಗಿದೆ.
ಇಂದು ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಹಲವು ಅಭಿವೃದ್ಧಿಕರ ಯೋಜನೆಗಳ ಕುರಿತು ಉಲ್ಲೇಖಿಸಲಾಗಿದೆ. ಕೃಷಿ, ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ. ಐದು ವರ್ಷಗಳ ಅವಧಿಯಲ್ಲಿ ಸುಮಾರು 1ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನೂ ನೀಡಲಾಗಿದೆ. ಇನ್ನು ಶಾಲಾ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆ, ನವೋದಯ ಶಾಲೆಗಳ ಸ್ಥಾಪನೆ, ಮಿಲಿಟರಿ ಶಾಲೆಗಳ ಸಥಾಪನೆ, ಶುದ್ಧ ಕುಡಿಯುವ ನೀರು ಸೇರಿದಂತೆ ಹಲವಾರು ಅಭಿವೃದ್ಧಿ ಪೂರಕ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.