ಚುನಾವಣಾ ಪ್ರಚಾರದ ಕುರಿತು ಶಾಕಿಂಗ್ ನಿರ್ಧಾರ ಕೈಗೊಂಡ ಕಿಚ್ಚ ಸುದೀಪ್! ಏನದು ಗೊತ್ತೇ?

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಕೆ ಮಾಡುವ ಉದ್ದೇಶದಿಂದ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ. ಜನರನ್ನು ತಮ್ಮತ್ತ ಆಕರ್ಷಿಸುವ ಸಲುವಾಗಿ ರಾಜಕಾರಣಿಗಳು ಜನಪ್ರಿಯ ಚಿತ್ರನಟ ನಟಿಯರನ್ನೂ ಸ್ಟಾರ್ ಕ್ಯಾಂಪೇನರ್ ಆಗಿ ಬಳಸುತ್ತಿದ್ದಾರೆ, ಈ ಬಾರಿ ಸುದೀಪ್, ದರ್ಶನ್, ಯಶ್, ದಿಗಂತ್ ಹಲವೆಡೆ ಚುನಾವಣಾ ಪ್ರಚಾರ ನಡೆಸಿದ್ದರು.

ಈ ಬಾರಿ ತಮ್ಮ ಆಪ್ತರ ಪರವಾಗಿ ಪ್ರಚಾರ ನಡೆಸಿದ ಸುದೀಪ್, ಗಣಿಧಣಿಗಳ ಪರವಾಗಿ, ಕೆಲವು ಎಡಬಿಡಂಗಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಆಕ್ಷೇಪಗಳು ಕೇಳಿ ಬರುತ್ತಿವೆ. ಅಲ್ಲದೇ, ದುಡ್ಡು ಕೊಟ್ಟರೆ ಇವರು ಏನ್ ಬೇಕಾದರೂ ಮಾಡ್ತಾರೆ, ಎಂಬ ಆಪಾದನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಸ್ಪಷ್ಟನೆ ನೀಡಲು ನಿರ್ಧರಿಸಿದ ಕಿಚ್ಚ ಸುದೀಪ್ ಗೂಗಲ್ ಪ್ಲಸ್‌ನಲ್ಲಿ ಹಾಕಿರುವ ಪೋಸ್ಟ್ ಮೂಲಕ ಉತ್ತರಿಸಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ತಮ್ಮ ಪೋಸ್ಟ್ ನಲ್ಲಿ ಅವರು ಬರೆದುಕೊಂಡಿದ್ದು ಈ ರೀತಿ ಇದೆ.

‘ನಾನು ಪ್ರಚಾರಕ್ಕೆ ಸೇರಿದ್ದು ಸುಮಾರು ವರ್ಷಗಳ ಪರಿಚಯದ ನನ್ನ ಕೆಲವು ಗೆಳೆಯರಿಗಾಗಿ. ಇವರು ಒಂದಲ್ಲ ಒಂದು ರೀತಿ ನನ್ನೊಟ್ಟಿಗೆ ನನ್ನ ಕಠಿಣ ಸಮಯದಲ್ಲಿ ನಿಂತವರು. ಸಣ್ಣದು ಅಥವಾ ದೊಡ್ಡದು ಎಂಬುದು ವಿಷಯವಲ್ಲ. ಅವರು ಅಂದು ನಿಂತದ್ದು ವಿಷಯ. ಈಗ ಅವರಿಗಾಗಿ ನಾನು ಅಲ್ಲಿರುವುದು  ಬಹುಶಃ ಅವರು ನನ್ನಿಂದ ಪಡೆಯುವ ಒಂದು ಸಣ್ಣ ಬೆಂಬಲ.  ಇದು ಕನಿಷ್ಠ ನಾನು ಅವರಿಗಾಗಿ ಮಾಡಬಹುದಾದದ್ದು. ಅದರಲ್ಲಿ ಯಾವುದೇ ವಿಷಾದವಿಲ್ಲ‌. ನನ್ನ ಗೆಳೆಯರ ಹಾಗೂ ಅಭಿಮಾನಿಗಳ ಸಲುವಾಗಿ ನಾನು ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಹಾಗೂ ನನ್ನ ಉಪಸ್ಥಿತಿಯಿಂದ ಫಲಿತಾಂಶಗಳು ಬದಲಾಗುತ್ತದೆ ಎಂದೂ ನಾನಂದು ಕೊಳ್ಳುವುದಿಲ್ಲ. ನಾನು ಒಬ್ಬ ಕಲಾವಿದ. ನನ್ನ ಪಯಣದಲ್ಲಿ ನನ್ನೊಟ್ಟಿಗೆ ಇದ್ದಂತಹ ಗೆಳೆಯರು ಹಾಗೂ ಅಭಿಮಾನಿಗಳ ಅಭಿಪ್ರಾಯ ಮುಖ್ಯವಾಗುತ್ತದೆ. ಇದು ನಾನು ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರ. ಆದರೂ ಈ ನಿರ್ಧಾರ ನನ್ನೊಟ್ಟಿಗೆ ನಿಂತ ನನ್ನ ಅಭಿಮಾನಿಗಳು ಹಾಗು ಗೆಳೆಯರ ಸಲುವಾಗಿ ಕೈಗೊಳ್ಳುತ್ತಿದ್ದೇನೆ. ನಾನು ಯಾವುದೇ ರೀತಿ ನನ್ನ ಕ್ರಮಗಳಲ್ಲಿ ಅವರಿಗೆ ನೋವುಂಟು ಮಾಡಲು ಇಚ್ಛಿಸುವುದಿಲ್ಲ,’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *