R.R ನಗರದಲ್ಲಿ ಕಾಂಗ್ರೆಸ್ ಬೆಂಬಲಿಸಿ ಎಂಬ ಡಿಕೆಶಿ ಮನವಿಗೆ ದೇವೇಗೌಡರ ಖಡಕ್ ಉತ್ತರ ನೋಡಿ!
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಇದೀಗ ಹಲವು ಹೊಸ ಸವಾಲು ಇದರಿಂದ ಹುಟ್ಟಿಕೊಂಡಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಧಾನಸೌಧದ ಒಳಗಷ್ಟೆ ಹೊರಗಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಖಡಕ್ ಆಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ರಾಜರಾಜೇಶ್ವರಿ ನಗರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ದೇವೇಗೌಡ ಅವರು, ಇಲ್ಲಿನ ಜೆಡಿಎಸ್ ಅಭ್ಯರ್ಥಿ ರಾಮಚಂದ್ರಪ್ಪ ಗೆಲ್ಲಿಸಲು ಪಣ ತೊಟ್ಟಿದ್ದೇನೆ ಎಂದು ಅವರು ಹೇಳಿದರು.
ರಾಜರಾಜೇಶ್ವರಿ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಡಿಕೆ ಶಿವಕುಮಾರ್ ಅವರಿಂದ ಮನವಿ ಇತ್ತು ಎನ್ನಲಾಗಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ದೇವೇಗೌಡ ಅವರು ಈ ಮಾತನ್ನು ಹೇಳಿದ್ದಾರೆ ಎಂದೇ ಅರ್ಥೈಸಲಾಗಿದೆ. ಚುನಾವಣಾ ಅಕ್ರಮ ಕಂಡುಬಂದ ಕಾರಣ ರಾಜರಾಜೇಶ್ವರಿ ನಗರ ಚುನಾವಣೆಯನ್ನು ಆಯೋಗವು ಮುಂದೂಡಿತ್ತು. ಇದೀಗ ಸೋಮವಾರ ಮತದಾನ ನಡೆಯಲಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರಪ್ಪ, ಕಾಂಗ್ರಸ್ ಅಭ್ಯರ್ಥಿಯಾಗಿ ಮುನಿರತ್ನ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಮುನಿರಾಜು ಗೌಡ ಕಣದಲ್ಲಿದ್ದಾರೆ.