ಕಾಂಗ್ರೆಸ್ – ಜೆಡಿಎಸ್ ಕಚ್ಚಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ: ಬಿಎಸ್ ವೈ!
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಅಧಿಕಾರಕ್ಕಾಗಿ ಕೈ ಜೋಡಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಆಡಳಿತಕ್ಕೆ ಸಂಬಂಧಿಸಿದ ಗೊಂದಲಗಳನ್ನು ಸೂಕ್ಷ್ಮವಾಗಿ ನೋಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ನಿನ್ನೆ ನಡೆದ ಅಗ್ನೇಯ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ” ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನವ ಕರ್ನಾಟಕ ನಿರ್ಮಾಣಕ್ಕೆ ಶಿಕ್ಷಕರು ಸಹಕಾರ ನೀಡಬೇಕು ಎಂದ ಅವರು, ಕಳೆದ 5 ವರ್ಷದ ಆಡಳಿತದಲಿದ್ದ ಕಾಂಗ್ರೆಸ್ ಶಿಕ್ಷಕರತ್ತ ತಿರುಗಿಯೂ ನೋಡಿರಲಿಲ್ಲ” ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಅವಕಾಶವಾದಿ ರಾಜಕಾರಣವನ್ನು ಜನರು ಒಪ್ಪುವುದಿಲ್ಲ, ಈಗಾಗಲೇ ಮೈತ್ರಿ ಸರಕಾರದಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದು, ಪರಿಷತ್ ಚುನಾವಣೆ ಬಳಿಕ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಇದೇ ವೇಳೆ ಪಕ್ಷದ ಅಭ್ಯರ್ಥಿ ನಾರಾಯಣ ಸ್ವಾಮಿ ಅವರನ್ನು ಜಾತಿ, ಮತ , ಕುಲ ನೋಡದೆ ಮತ ನೀಡಿ ಗೆಲ್ಲಿಸಿ ಎಂದು ಕರೆ ನೀಡಿದರು.