ನ್ಯೂಸ್ ಕನ್ನಡ ವರದಿ-(29.06.18): ಈಗಾಗಲೇ ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿಯು ಸಂಪೂರ್ಣವಾಗಿ ಹದಗೆಟ್ಟಿದೆ. ಪಾಕಿಸ್ತಾನದ ಗಡಿಭಾಗದಿಂದ ಭಾರತದ ಒಳ ನುಸುಳುತ್ತಿರುವ ಉಗ್ರಗಾಮಿಗಳು ಜಮ್ಮುಕಾಶ್ಮೀರ ಸ್ವಾಸ್ಥ್ಯವನ್ನು ಹಾಳುಗೆಡವುತ್ತಿದ್ದಾರೆ. ಇದೀಗ ಉಗ್ರರ ವಿರುದ್ಧ ಕಾರ್ಯಾಚರಣೆಯು ಪ್ರಾರಂಭವಾಗಿದ್ದು, ಇದೀಗ ಮತ್ತೆ ಉಗ್ರರ ವಿರುದ್ಧ ಭಾರತೀಯ ಸೇನೆಯು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿನ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರಗಾಮಿಗಳನ್ನು ಭಾರತೀಯ ಸೇನೆಯ ಯೋಧರು ಬೇಟೆಯಾಡಿದ್ದಾರೆ. ಈ ದಾಳಿಯಲ್ಲಿ ಉಗ್ರಗಾಮಿಯೊಬ್ಬ ಬಲಿಯಾಗಿದ್ದಾನೆ.
ಆರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಆಧಾರಿಸಿ ಕುಪ್ವಾರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಹತನಾಗಿರುವ ಉಗ್ರ ಯಾವ ಸಂಘಟನೆಗೆ ಸೇರಿದವ ಎಂಬುದು ಇನ್ನೂ ತಿಳಿದಿಲ್ಲ.