ಉಳ್ಳಾಲದ ಕೋಟೆಪುರದಲ್ಲಿ ಯಶಸ್ವೀ ರಕ್ತದಾನ ಶಿಬಿರ

ಮಂಗಳೂರು,ಫೆಬ್ರವರಿ 24 : ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಹಾಗೂ ಎಸ್.ಡಿ.ಪಿ.ಐ ಉಳ್ಳಾಲ ವಲಯ ಮತ್ತು ಜಮಿಯ್ಯತುಲ್ ಫಲಾಹ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಬಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರವು ದಿನಾಂಕ 24 ಫೆಬ್ರವರಿ 2019 ನೇ ಭಾನುವಾರದಂದು ಉಳ್ಳಾಲ ಕೋಟೆಪುರದ ಅನುದಾನಿತ ಟಿಪ್ಪು ಸುಲ್ತಾನ್ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಠಾರದಲ್ಲಿ ಯಶಸ್ವಿಯಾಗಿ ಜರುಗಿತು.

ಟಿಪ್ಪು ಸುಲ್ತಾನ್ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯ ಮೂಲಕ ಆರಂಭಗೊಂಡ ಸಭಾ ಕಾರ್ಯಕ್ರಮವನ್ನು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಜನಾಬ್ ಅಕ್ರಂ ಹಸನ್ ರವರು ಉದ್ಘಾಟಿಸಿದರು.

ಜಮಿಯ್ಯತುಲ್ ಫಲಾಹ್ ಮಂಗಳೂರು ಅದ್ಯಕ್ಷರಾದ ಜನಾಬ್ ಹಾಜಿ ಇಬ್ರಾಹಿಂ ಕೋಡಿಜಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ರಕ್ತ ದಾನ ಶಿಬಿರದಲ್ಲಿ ಒಟ್ಟು 42 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿಗಳ ತಂಡ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.


ಮುಖ್ಯ ಅತಿಥಿಗಳಾಗಿ ಎಂ.ಎಚ್ ಮಲಾರ್,ಮುಸ್ತಫಾ ಅಡ್ಡೂರು ದೆಮ್ಮಲೆ,ಯು.ಕೆ ಅಬ್ಬಾಸ್,ರಮೀಝ್ ಕೋಡಿ,ಕೆ.ಎಂ.ಕೆ ಮಂಜನಾಡಿ,ನಝೀರ್ ಕೋಟೆಪುರ,ಇಮ್ರಾನ್ ಮದಕ, ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಮತ್ತು ಎಸ್.ಡಿ.ಪಿ.ಐ ಉಳ್ಳಾಲ ವಲಯ ಹಾಗೂ ಜಮಿಯ್ಯತುಲ್ ಫಲಾಹ್ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಶ್ರಫ್ ಅರಬಿ ಕಲ್ಲಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

ರಕ್ತ ದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ,ಆಸ್ಪತ್ರೆಯ ಸಿಬಂದಿ ವರ್ಗಕ್ಕೂ,ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದವರಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಹಗಲಿರುಳು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಮಾಧ್ಯಮ ಪ್ರತಿನಿಧಿಗಳಿಗೂ ಸಂಘಟಕರು ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಪ್ರಕಟಣೆ:
ಮಾಧ್ಯಮ ವಿಭಾಗ
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ).

Leave a Reply

Your email address will not be published. Required fields are marked *