ಸುಮಲತಾ ಅವರಿಗೆ ಮಂಡ್ಯದಿಂದ ಕಾಂಗ್ರೆಸ್ ಟಿಕೆಟ್ ನೀಡುವ ಕುರಿತು ಯತೀಂದ್ರ ಹೇಳಿದ್ದೇನು?

ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆ ಕಂಡು ಬರುತ್ತಿದ್ದು, ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಟಿಕೆಟ್ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗು, ಶಾಸಕ ರವೀಂದ್ರ,  ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬಹುದಾಗಿದೆ ಎಂದರು. ಒಂದು ವೇಳೆ ಮೈತ್ರಿ ಧರ್ಮ ಪಾಲನೆ ಮಾಡಲೇಬೇಕೆಂದು ವರಿಷ್ಠರು ತೀರ್ಮಾನಿಸಿ, ಜೆಡಿಎಸ್ ಪಕ್ಷಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಾದರೆ ಕೂಡಲೇ ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ವತಿಯಿಂದ ಎರಡು ವಿಧಾನ ಪರಿಷತ್ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹರಿದು-ಹಂಚಿ ಹೋಗದಂತೆ ಪಕ್ಷದ ವರಿಷ್ಠರು ನೋಡಿಕೊಳ್ಳಬೇಕಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

Leave a Reply

Your email address will not be published. Required fields are marked *