ತಮ್ಮ ಸ್ವಾರ್ಥದ ರಾಜಕೀಯಕ್ಕೆ ‘ಸರ್ಜಿಕಲ್ ಸ್ಟ್ರೈಕ’ನ್ನು ಬಳಸಿದ ಯಡಿಯುರಪ್ಪ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ: ಈಗಾಗಲೇ ಆಪರೇಷನ್ ಕಮಲ ನಡೆಸಲು ಪ್ರಯತ್ನಿಸಿ ಕೈಸುಟ್ಟುಕೊಂಡು ಆಡಿಯೋ ಸಿಡಿ ಪ್ರಕರಣದಲ್ಲಿ ಜೈಲಿಗೆ ಹೋಗವ ಪರಿಸ್ಥಿತಿವರೆಗೂ ಹೋಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಡೈಲಾಗ್ ಹೊಡೆದಿದ್ದಾರೆ.

ಭಾರತೀಯ ವಾಯುಪಡೆಯ ವೀರ ಯೋಧರ ಅಸಾಮಾನ್ಯ ಸಾಧನೆಯನ್ನು ಸಂಪೂರ್ಣ ಬಿಜೆಪಿ ಪಕ್ಷದ ಸಾಧನೆಯಂತೆ ಬಿಂಬಿಸಿದ ಯಡಿಯುರಪ್ಪ, ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದರು.

Leave a Reply

Your email address will not be published. Required fields are marked *