ಲೋಕಸಭಾ ಚುನಾವಣೆಗೆ ಮಾರ್ಚ್ 13ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!: ಗುಂಡೂರಾವ್

ನ್ಯೂಸ್ ಕನ್ನಡ ವರದಿ: ಬಹುತೇಕ ಮೇ ತಿಂಗಳ ಆರಂಭದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಸಿದ್ಧಗೊಂಡಿದ್ದು ಮಾ.13ರೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಗೆಲ್ಲುವ ಅಭ್ಯರ್ಥಿಗಳಿಗಷ್ಟೇ ಆದ್ಯತೆ ನೀಡಲಾಗಿದೆ ಎಂದರು. ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ವಿಚಾರದಲ್ಲಿ ಇನ್ನೂ ಅಂತಿಮ ತೀರ್ಮಾನವಾಗಿಲ್ಲ’ ಎಂದರು.

ಮಾರ್ಚ್ 11ರಂದು ದೆಹಲಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದರು. ಸುಮಲತಾ ಅಂಬರೀಶ್ ಅವರ ಸ್ಪರ್ಧೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಅವರಿಗೆ ಕೆಲ ಕಾಂಗ್ರೆಸ್ ಮುಖಂಡರು ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.

Leave a Reply

Your email address will not be published. Required fields are marked *