ಹಾಲಿ ಸಂಸದರಾದ ಶೋಭಾ ಹಾಗೂ ನಳಿನ್ ಕುಮಾರ್ ಕಟೀಲ್’ಗೆ ಟಿಕೆಟ್ ಪಕ್ಕಾ!: ಯಡಿಯುರಪ್ಪ ಸ್ಪಷ್ಟನೆ

ನ್ಯೂಸ್ ಕನ್ನಡ ವರದಿ: ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕರಿಗೆ ಅವಕಾಶ ದೊರೆಯಲಿದೆ. ಇದೇ 16ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ವೈಫಲ್ಯಗಳು, ವರ್ಗಾವಣೆ ದಂಧೆ, ಭ್ರಷ್ಟಾಚಾರಗಳೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 20-22ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಅನುಕೂಲವಾಗಲಿದೆ ಎಂದರು.

ಇದೇ 15ರಂದು ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಎಲ್ಲ ಪ್ರಮುಖರುಒಗ್ಗೂಡಿ 28ಕ್ಷೇತ್ರಗಳ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ 16ರಂದು ನಡೆಯಲಿರುವ ವರಿಷ್ಠರ ಸಭೆಯಲ್ಲಿ ಹಾಲಿ ಸಂಸದರು ಸೇರಿದಂತೆ ಇತರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂದು ನುಡಿದರು.

Leave a Reply

Your email address will not be published. Required fields are marked *