ಬಿಜೆಪಿಯ ಚುನಾವಣೆ ಸ್ಪರ್ಧೆಯ ಆಫರ್ ತಿರಸ್ಕರಿಸಿದ ವೀರೇಂದ್ರ ಸೆಹ್ವಾಗ್! ಕಾರಣವೇನು ಗೊತ್ತೇ?
ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಹತ್ತಿರ ಬಂದಂತೆ ತೀವ್ರ ರಾಜಕೀಯ ಚಟುವಟಿಕೆಗಳು ದೇಶಾದ್ಯಂತ ಕಂಡುಬರುತ್ತಿದ್ದು, ಗೆಲ್ಲುವ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳು ಮಣೆಹಾಕುವುದು ಈ ಸಂದರ್ಭದಲ್ಲಿ ಸಾಮಾನ್ಯ. ಅದೇ ರೀತಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲ್ಲಿಸಿದ್ದ ಮನವಿಯನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ನಿರಾಕರಿಸಿದ್ದಾರೆ ಎಂದು ದೆಹಲಿ ಬಿಜೆಪಿ ನಾಯಕರು ಹೇಳಿದ್ದಾರೆ.
ನನಗೆ ರಾಜಕೀಯ ಹಾಗೂ ಚುನಾವಣಾ ಸ್ಪರ್ಧೆಯಲ್ಲಿ ಆಸಕ್ತಿಯೇ ಇದ್ಲವೆಂದು ಸೆಹ್ವಾಗ್ ತಿಳಿಸಿದ್ದಾರೆ. ಬಿಜೆಪಿ ಸಂಸದ ಪರ್ವೇಶ್ ವರ್ಮ ಅವರ ಕ್ಷೇತ್ರವಾದ ಪಶ್ಚಿಮ ದೆಹಯಿಂದ ವೀರೇಂದ್ರ ಸೆಹ್ವಾಗ್ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿತ್ತು. ಅದನ್ನು ಸೆಹ್ವಾಗ್ ಟಿಕೆಟ್ ನಿರಾಕರಿಸಿದ್ದಾರೆ, ಆದರೆ ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟರ್ ಗೌತಮ್ ಗಂಭೀರ್ ಅವರು ಸ್ಪರ್ಧೆಯ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೋ ಕಾದು ನೋಡಬೇಕಾಗಿದೆ.