ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದು ಸಮಾಜವಾದಿ ಪಕ್ಷ ಸೇರಿದ ಸಂಸದ ಶ್ಯಾಮ ಚರಣ್ ಗುಪ್ತಾ!
ನ್ಯೂಸ್ ಕನ್ನಡ ವರದಿ: ದೇಶಾದ್ಯಂತ ಎಲ್ಲಾ ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ತಯಾರಿ ನಡೆಸುತ್ತಿರುವಂತೆಯೇ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಪ್ರದೇಶದ ಪ್ರಯಾಗರಾಜ್ ಬಿಜೆಪಿ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.
2014ರಲ್ಲಿ ಅಲಹಾಬಾದ್(ಪ್ರಯಾಗರಾಜ್) ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶ್ಯಾಮಾ ಚರಣ್ ಗುಪ್ತಾ, ಬಿಜೆಪಿಯ ಲೋಕಸಭೆ ಚುನಾವಣೆಯ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕೆಲ ಸಮಯದಲ್ಲೇ ರಾಜೀನಾಮೆ ಪ್ರಕಟಿಸಿದ ಗುಪ್ತಾ, ಬಂಡಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಘಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿರುವ ಶ್ಯಾಮಾ ಚರಣ್ ಗುಪ್ತಾ, ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಸಮಾಜ ಒಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ರಾಜಕೀಯ ನಿರ್ಧಾರ ಅವರ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ ಉಂಟುಮಾಡಿದೆ.