ಮೋದಿ ಸರಕಾರ ದಲಿತರಿಗಾಗಿ ಏನೂ ಮಾಡಿಲ್ಲ: ಗಂಭೀರ ಆರೋಪ ಮಾಡಿದ ಬಿಜೆಪಿ ಸಂಸದ!

ನ್ಯೂಸ್ ಕನ್ನಡ ವರದಿ-(08.04.18): ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಇದೀಗ ಬಿಜೆಪಿಯ ಸಂಸದರೇ ಆರೋಪಗಳನ್ನು ಮಾಡುತ್ತಿದ್ದಾರೆ. ಇದೀಗ ದಲಿತರ ವಿಷಯಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಬಿಜೆಪಿ ಸಂಸದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ದಲಿತರ ಕುರಿತಾದಂತೆ ಪ್ರಧಾನಿ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ನಾಲ್ಕನೇ ಸಂಸದರಾಗಿದ್ದಾರೆ ಬಿಜೆಪಿಯ ಯಶವಂತ್ ಸಿಂಗ್. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ದಲಿತರಿಗಾಗಿ ಏನೂ ಮಾಡಿಲ್ಲವೆಂದು ಸಂಸದ ಯಶವಂತ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ನಾನು ಸಂಸದನಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಾತ್ರ ನಿಮ್ಮನ್ನು ಭೇಟಿಯಾಗಿದ್ದು, ದಲಿತರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದೆ. ವಿವಿಧ ಸಂಘಟನೆಗಳು ಆ ಬಗ್ಗೆ ನಮ್ಮಲ್ಲಿ ಮನವಿ ಮಾಡುತ್ತಲೇ ಇವೆ. ಆದರೆ, ದೇಶದ 30 ಕೋಟಿ ದಲಿತರಿಗೆ ನೆರವಾಗುವ ನಿಟ್ಟಿನಲ್ಲಿ, ನಾಲ್ಕು ವರ್ಷಗಳ ಅಧಿಕಾರ ಪೂರೈಸಿದ ಹೊರತಾಗಿಯೂ ನಿಮ್ಮ ಸರ್ಕಾರ ಏನೂ ಮಾಡಿಲ್ಲ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

Leave a Reply

Your email address will not be published. Required fields are marked *