ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬಿಜೆಪಿಯಿಂದ ಬೇಷರತ್ತಾಗಿ ಬೆಂಬಲ !

ನ್ಯೂಸ್ ಕನ್ನಡ ವರದಿ : ಮಂಡ್ಯ ಲೋಕಸಭಾ ಚುನಾವಣೆ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಇನ್ನು ಅಂಬರೀಶ್ ಪತ್ನಿ ಸುಮಲತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಿರೋದ್ರಿಂದ ಮಂಡ್ಯ ಜನ ಗೊಂದಲಕ್ಕೆ ಒಳಗಾಗಿದ್ದಾರೆ. ಇನ್ನು ಸಾಮಾನ್ಯ ಜನರ ಗತಿ ಈ ರೀತಿಯದಾಗಿದ್ದರೆ, ಇನ್ನು ಹೈಕಮಾಂಡಿನ ಸೂಚನೆಯಂತೆ ಅಭಿಪ್ರಾಯ ಸಂಗ್ರಹ ಸಭೆ ನಡೆಸಿರುವ ಜಿಲ್ಲಾ ಬಿಜೆಪಿ ಘಟಕವು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೇಷರತ್ತಾಗಿ ಬೆಂಬಲಿಸುವ ಒಂದು ಸಾಲಿನ ನಿರ್ಣಯ ಮಾಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆಯ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಹೀಗಾಗಿ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರಲ್ಲಿ ಗೊಂದಲ ಮುಂದುವರೆದಿದೆ.

ಹೈಕಮಾಂಡ್‌ ಆದೇಶದಂತೆ ಸ್ಥಳೀಯ ನಾಯಕರ ಅಭಿಪ್ರಾಯ ಕ್ರೋಡೀಕರಣಕ್ಕೆ ಮುಂದಾದ ರಾಜ್ಯ ಬಿಜೆಪಿ, ಗುರುವಾರ ಜಿಲ್ಲಾ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ರವಾನಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಸ್ಪರ್ಧೆಯ ಸಾಧಕ- ಬಾಧಕಗಳು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅವರಿಗೆ ಬೆಂಬಲಿಸಿದರೆ ಆಗುವ ಲಾಭಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಲಾಯಿತು. ಸುಮಲತಾ ಮತ್ತು ನಿಖಿಲ್ ನಡುವಿನ ಮುಖಾಮುಖಿ ಸ್ಪರ್ಧೆಯಲ್ಲಿ ಬಿಜೆಪಿಯ ಪಾತ್ರ ಏನು ಎಂಬುದರ ಬಗ್ಗೆಯೂ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಅಂತಿಮವಾಗಿ ಸುಮಲತಾ ಅವರನ್ನು ಬೆಂಬಲಿಸಲು ನಿರ್ಧರಿಸಿ ನಿರ್ಣಯಕೊಳ್ಳಲಾಯಿತು.

Leave a Reply

Your email address will not be published. Required fields are marked *