ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆ!: ಸುನಿಲ್ ಕುಮಾರ್

ನ್ಯೂಸ್ ಕನ್ನಡ ವರದಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಇಂದು ನಗರದ ಬಂಟ್ಸ್ ಹಾಸ್ಟೆಲ್ ಬಳಿ ಬಿಜೆಪಿ ಆಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು. ಈ ಮೊದಲು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರಾಜಕಾರಣದಲ್ಲಿ ಇನ್ನು ಬಚ್ಚಾ ಎಂದು ವ್ಯಂಗ್ಯವಾಡಿದ ಸುನಿಲ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆ ಆರಂಭಿಸಲಾಗುವುದು. ಬಜರಂಗದಳ ಶಾಖೆ ತೆರೆದು ಸಂಘಟನೆ ಬಲಿಷ್ಠ ಮಾಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ. ಎಂತೆಂಥ ಕಾಂಗ್ರೆಸ್ ನಾಯಕರರಿಗೆ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಆ ಬಚ್ಚಾ ರಾಜಕಾರಣಿಯಿಂದ ನಿಷೇಧಿಸಲು ಸಾಧ್ಯನಾ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *