ತೇಜಸ್ವಿನಿ ಅನಂತ್ ಕುಮಾರ್’ಗೆ ಟಿಕೆಟ್ ತಪ್ಪಿದ್ದು ಮನಸ್ಸಿಗೆ ತುಂಬಾ ನೋವು ನೀಡಿದೆ!: ಆರ್ ಅಶೋಕ್

ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿದ್ದು , ನಿನ್ನೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆದ ಕಾರಣ ಎಲ್ಲರೂ ನಾಮಪತ್ರ ಸಲ್ಲಿಸುವಲ್ಲಿ ವ್ಯಸ್ತರಾಗಿದ್ದು, ಬೆಂಗಳೂರು ದಕ್ಷಿಣದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದರು.

ಆದರೆ ಇದೇ ಸಂದರ್ಭದಲ್ಲಿ ಅತ್ಯಂತ ಕೊನೆಯ ಗಳಿಗೆಯಲ್ಲಿ ಟಿಕೆಟ್ ವಂಚಿತರಾದ ತೇಜಸ್ವಿ ಅನಂತ್ ಕುಮಾರ್ ಗೆ ಬೆಂಬಲದ ಮಹಾಪೂರ ಹರಿದು ಬಂದಿದೆ. ‘ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಯಾರ ಆಯ್ಕೆ ಗೊತ್ತಿಲ್ಲ. ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಮನಸ್ಸಿಗೆ ತುಂಬಾ ನೋವಾಗಿದೆ’ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಬೇಸರ ಹೊರಹಾಕಿದ್ದಾರೆ.

ತೇಜಸ್ವಿನಿ ಅನಂತ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿದ್ದಕ್ಕೆ ತೇಜಸ್ವಿನಿ ಅವರಿಗೂ ನೋವುಂಟಾಗಿದೆ. ಈಗಾಗಲೇ ಅನೇಕ ನಾಯಕರು ಅವರಿಗೆ ಸಾಂತ್ವನ ಹೇಳಿದ್ದಾರೆ. ತೇಜಸ್ವಿ ಸೂರ್ಯ ಆಯ್ಕೆಯ ಬಗ್ಗೆ ಯಾವುದೇ ಕಮೆಂಟ್ ಮಾಡಲ್ಲ ಎಂದು ತಿಳಿಸಿದರು. ತೇಜಸ್ವಿನಿ ಅನಂತ್‍ಕುಮಾರ್ ಹೆಸರನ್ನು ಹೊರತುಪಡಿಸಿ ಬೇರೆ ಯಾವುದೇ ಹೆಸರನ್ನು ರಾಜ್ಯ ನಾಯಕರು ಶಿಫಾರಸ್ಸು ಮಾಡಿರಲಿಲ್ಲ. ಆದರೆ ತೇಜಸ್ವಿ ಸೂರ್ಯ ಅವರ ಹೆಸರು ಮಧ್ಯದಲ್ಲಿ ಹೇಗೆ ಸೇರಿತು ಎನ್ನುವುದು ನಮಗೆ ಗೊತ್ತಿಲ್ಲ. ಹಿರಿಯ ನಾಯಕನಾಗಿ ಹೈಕಮಾಂಡ್ ಆದೇಶವನ್ನು ಪಾಲಿಸಬೇಕಾಗುತ್ತದೆ. ತೇಜಸ್ವಿ ಸೂರ್ಯ ಪರ ಪ್ರಚಾರ ಮಾಡುತ್ತೆವೆ ಎಂದು ಸ್ಪಷ್ಟನೆ ನೀಡಿದರು.7

Leave a Reply

Your email address will not be published. Required fields are marked *