ಕೇವಲ 15 ದಿನಗಳಲ್ಲಿ ದೇಶದಾದ್ಯಂತ 540 ಕೋಟಿ ಅಕ್ರಮ ಹಣ ಹಾಗೂ ಮದ್ಯ ವಶ !

ನ್ಯೂಸ್ ಕನ್ನಡ ವರದಿ : ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರಗಳಿಗೆ ಸರಕಾರದಿಂದ ಚುನಾವಣೆ ಆಯೋಗದ ಅನುಮತಿ ಪಡೆಯುವ ಅಗತ್ಯ ಇಲ್ಲ ಎಂದು ಚುನಾವಣಾ ಸಮಿತಿ ಮೂಲಗಳು ತಿಳಿಸಿವೆ. ಇನ್ನು ಚುನಾವಣಾ ನೀತಿ ಸಂಹಿತೆ ಜಾರಿ ಆದ ಕೇವಲ 15 ದಿನಗಳಲ್ಲಿ ದೇಶದಾದ್ಯಂತ 540 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಹಣ, ಮದ್ಯ, ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಕಡಿಮೆ ಹಣ, ಮದ್ಯ ವಶವಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಇದೆ. ಕರ್ನಾಟಕದಲ್ಲಿ ಈವರೆಗೆ 26.53 ಕೋಟಿ ಮೌಲ್ಯದ ಅಕ್ರಮ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ 19.11 ಕೋಟಿ, ತೆಲಂಗಣದಲ್ಲಿ 8.2 ಕೋಟಿ ಅಕ್ರಮ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡು ರಾಜ್ಯದಲ್ಲಿ ಅತಿ ಹೆಚ್ಚು ಮೌಲ್ಯದ ಅಕ್ರಮ ಹಣ, ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲಿ 107.24 ಕೋಟಿ ರೂಪಾಯಿ ಮೌಲ್ಯದ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ. ಮದ್ಯ ನಿಷೇಧ ಮಾಡಿರುವ ಉತ್ತರ ಪ್ರದೇಶದಲ್ಲಿ ಈವರೆಗೆ 104.53 ಕೋಟಿ ಮೌಲ್ಯದ ಹಣ, ಮದ್ಯ, ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡಿದ್ದು, ಈ ಮಾಹಿತಿ ಕೇವಲ ಹದಿನೈದು ದಿನಗಳದ್ದಾಗಿದೆ. ಮಾರ್ಚ್‌ 10 ರಿಂದ 25ರವರೆಗೆ ವಿವಿಧ ಕಡೆಗಳಲ್ಲಿ ವಶಪಡಿಸಿಕೊಂಡ ಅಕ್ರಮ ಹಣ, ಮದ್ಯ, ಮಾದಕಗಳ ಮಾಹಿತಿಗಳನ್ನು ಕ್ರೂಡೀಕರಿಸಿ ಕೇಂದ್ರ ಚುನಾವಣಾ ಆಯೋಗ ನೀಡಿದೆ.

Leave a Reply

Your email address will not be published. Required fields are marked *