ನಿಮ್ಮ ಐಟಿ ದಾಳಿಗೆ ನಾವು ಹೆದರಲ್ಲ, ರಾಜ್ಯದಲ್ಲಿ ಬಿಜೆಪಿ ಸರ್ವನಾಶವಾಗಲಿದೆ!: ಸಿಎಂ ಕುಮಾರಸ್ವಾಮಿ

ನ್ಯೂಸ್ ಕನ್ನಡ ವರದಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುವ ಭೀತಿಯಿಂದ ವಾಮಮಾರ್ಗ ಅನುಸರಿಸುತ್ತಿದೆ. ಆದಾಯ ತೆರಿಗೆ ಇಲಾಖೆ ಸೇರಿದಂತೆ ಯಾವುದೇ ದಾಳಿ ಮಾಡಿದರೂ ನಾವು ಹೆದರುವುದಿಲ್ಲ. ಯಾವ ಪರಿಣಾಮವೂ ಬೀರುವುದಿಲ್ಲ, ನಿಷ್ಪಕ್ಷಪಾತವಾಗಿ ಲೋಕಸಭೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿಲ್ಲದೆ ವಾಮಮಾರ್ಗದ ಮೂಲಕ ತನ್ನ ಅಧೀನದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ವನಾಶವಾಗಲಿದೆ. ಜೆಡಿಎಸ್ ಪಕ್ಷವನ್ನು ಹೆದರಿಸುವ ಪ್ರಯತ್ನದ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಐಟಿ ದಾಳಿ ಮೂಲಕ ಭಯದ ವಾತಾವರಣ ಸೃಷ್ಟಿಸುವ ಉದ್ದೇಶ ಹೊಂದಿದ್ದಾರೆ ಎಂದು ಗುಡುಗಿದರು.ತಾವು ಕಾನೂನು ರೀತಿ ಹೋರಾಟಕ್ಕೆ ತಯಾರಾಗಿದ್ದೇವೆ ಎಂದ ಅವರು ಮುಖ್ಯಮಂತ್ರಿ ಮನೆ ಬಾಗಿಲು 24 ಗಂಟೆಯೂ ಬಾಗಿಲು ತೆರೆದಿರುತ್ತದೆ, ದಾಳಿ ಮಾಡಲಿ ಎಂದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *