ದೇಶ ಕಂಡ ಅತ್ಯಂತ ದುರ್ಬಲ ಹಾಗೂ ಸರ್ವಾಧಿಕಾರಿ ಪ್ರಧಾನಿ ಎಂದರೆ ಮೋದಿ !: ವಿ.ಎಸ್‌. ಉಗ್ರಪ್ಪ

ನ್ಯೂಸ್ ಕನ್ನಡ ವರದಿ : ಕೂಡ್ಲಿಗಿ ಮತ್ತು ಹೊಸಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಬಳ್ಳಾರಿ ಲೋಕಸಭೆ ಚುನಾವಣೆ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪ, ಮೋದಿ ವಿರುದ್ಧ ಕಿಡಿಕಾರಿ ಮೋದಿ ನೇತೃತ್ವದ ಕೇಂದ್ರ ಸರಕಾರ ಎಲ್ಲ ರಂಗಗಳಲ್ಲಿಯೂ ವಿಫಲವಾಗಿದೆ. ನರೇಂದ್ರ ಮೋದಿ ಈ ದೇಶ ಕಂಡ ಅತ್ಯಂತ ದುರ್ಬಲ ಹಾಗೂ ಸರ್ವಾಧಿಕಾರಿ ಪ್ರಧಾನಿ ಎಂದು ಹೇಳಿದರು.

ಕಳೆದ 5 ವರ್ಷಗಳಲ್ಲಿ ಕೇವಲ 28 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡಿರುವ ಮೋದಿ, ಯುವಕರ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಆಡಿ ಅಪಮಾನ ಮಾಡಿದ್ದಾರೆ ಎಂದರು. ಇನ್ನು ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸಂವಿಧಾನದ ಬಗ್ಗೆ ಜ್ಞಾನ ಇಲ್ಲ ಎಂದು ಪರೋಕ್ಷ ವಾಗಿ ಟೀಕಿಸಿದ ಅವರು, ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಪಡೆಯುತ್ತಾರೆ. ಇದನ್ನು ತಪ್ಪಿಸಲು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮುಖಂಡರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಜನರು ಬಿಜೆಪಿ ವಿರುದ್ಧ ಮತ ನೀಡುವುದರೊಂದಿಗೆ ಮೋದಿ ಮೇಲೆ ದಾಳಿ ಮಾಡಲಿದ್ದು, ಬಿಜೆಪಿ ಹಾಗೂ ಮೋದಿ ತರಗಲೆಗಳಂತೆ ಉದುರಿ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದರು.

Leave a Reply

Your email address will not be published. Required fields are marked *