ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಅಡ್ಡಿಯಾಗಿರುವುದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ!: ಮೋದಿ ಟೀಕೆ

ನ್ಯೂಸ್ ಕನ್ನಡ ವರದಿ : ಈಶಾನ್ಯ ರಾಜ್ಯಗಳು ಅದರಲ್ಲೂ ಪಶ್ಚಿಮ ಬಂಗಾಳದಲ್ಲೂ ಕಮಲ ಅರಳಿಸಬೇಕು ಎಂದು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಟೀಕಾಸ್ತ್ರಗಳನ್ನು ಬಿಟ್ಟರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಪ್ರಮುಖ ಅಡ್ಡಿಯಾಗಿರುವುದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ಬಂಗಾಳದಲ್ಲಿ ಮೋದಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದರು. ದೇಶದ ಅಭಿವೃದ್ಧಿಗಾಗಿ ನಮ್ಮ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿಗೆ ಇಲ್ಲಿನ ಮುಖ್ಯಮಂತ್ರಿಯೇ ಅಡ್ಡಿಯಾಗಿದ್ದಾರೆ. ಅವರು ಒಂದು ರೀತಿ ಸ್ಪೀಡ್‌ ಬ್ರೇಕರ್‌ ರೀತಿಯಲ್ಲಿದ್ದಾರೆ ಎಂದು ಮೋದಿ ಟೀಕಿಸಿದರು. ಮಹಾಘಟಬಂಧನ್‌ ಹೆಸರಿನಲ್ಲಿ ನನ್ನ ವಿರುದ್ಧ ಸಮರ ಸಾರಲಾಗುತ್ತಿದೆ. ಮೋದಿ ಹಠಾವೋ, ಮೋದಿ ಹಠಾವೋ ಎಂಬುದೇ ಇವರ ಮಂತ್ರವಾಗಿದೆ. ಮೋದಿ ಅಂಥ ಅಪರಾಧವನ್ನಾದರೂ ಮಾಡಿದ್ದು ಏನು. ದೇಶದ ಅಭಿವೃದ್ಧಿಗೆ ಶ್ರಮಿಸಿದ್ದೇ ತಪ್ಪಾ ಎಂದು ಮೋದಿ ಮತದಾರರನ್ನು ಪ್ರಶ್ನಿಸಿದರು.

Leave a Reply

Your email address will not be published. Required fields are marked *