ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಜೀವಬೆದರಿಕೆ ಪ್ರಕರಣ: ಮತ್ತೆ ಸಂಘಪರಿವಾರದ ಮೂವರ ಬಂಧನ!

ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸತತ ಮೂರನೇ ಬಾರಿ ಗೆಲುವನ್ನು ಪಡೆದ ನಳಿನ್ ಕುಮಾರ್ ಕಟೀಲ್ ಅವರ ಗೆಲುವಿನ ವಿಜಯೋತ್ಸವದ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅವಾಚ್ಯವಾಗಿ ನಿಂದಿಸಿ ಹಾಗೂ ಜೀವಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳದ ನಿವಾಸಿಗಳಾದ ಸಂಜೀವ, ಪ್ರೀತಂ ಮತ್ತು ಕರುಣಾಕರ ಬಂಧಿತ ಆರೋಪಿಗಳು. ಬಂಧಿತ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದ ದಿನವಾದ ಮೇ 23ರಂದು ಘಟನೆ ನಡೆದಿದ್ದು, ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಭಜರಂಗದಳದ ಕಾರ್ಯಕರ್ತರು ಸಂಜೆ ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಗುಂಪಾಗಿ ಸಂಭ್ರಮಾಚರಣೆಯಲ್ಲಿ ತೊಡಗಿ ದೂರುದಾರ ಮಿಥುನ್‌ ರೈ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದಿದ್ದು, ಜೀವ ಬೆದರಿಕೆ ಹಾಕಿ, ಸಾರ್ವಜನಿಕ ಸ್ಥಳದಲ್ಲಿ ಘೋಷಣೆ ಕೂಗುತ್ತಾ ಸಾರ್ವಜನಿಕ ಶಾಂತಿ ಭಂಗ, ಗುಂಪುಗಳ ಮಧ್ಯೆ ಘರ್ಷಣೆಯನ್ನು ಉಂಟು ಮಾಡಿದ್ದರು. ಆ ಸಂದರ್ಭದಲ್ಲಿ ತೆಗೆದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿಂದೆ ಬಂಧಿತರಾದವರು

Leave a Reply

Your email address will not be published. Required fields are marked *