ಕುಮಾರಸ್ವಾಮಿ ಗ್ರಾಮವಾಸ್ತವ್ಯವವನ್ನು ಸಮರ್ಥಿಸಿದ ಈಶ್ವರಪ್ಪ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ : ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ತಮ್ಮ ನೇರ ಮಾತುಗಳ ಮೂಲಕ ಸುದ್ದಿ ಮಾಡುವವರು. ಹಲವಾರು ಭಾರೀ ಅವರ ಹೇಳಿಕೆಗಳು ವಿವಾದ ಹುಟ್ಟುಹಾಕಿದ್ದು ಇದೆ. ಇನ್ನು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇದೀಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಯೋಜನೆಯೊಂದಕ್ಕೆ ಬೆಂಬಲ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ನಾನು ಕುಮಾರಸ್ವಾಮಿ ಅವರನ್ನು ಟೀಕೆ ಮಾಡುವುದಕ್ಕೆ ಹೋಗುವುದಿಲ್ಲ. ಗ್ರಾಮ ವಾಸ್ತವ್ಯ ಎನ್ನುವುದು ಒಂದು ಒಳ್ಳೆಯ ಕಾರ್ಯಕ್ರಮ ಎಂದಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೇಜು ಕುರ್ಚಿಗಳು ಸರಿಯಾಗಿಲ್ಲ. ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಿದರೆ ಒಳಿತು. ಗ್ರಾಮ ವಾಸ್ತವ್ಯದಿಂದ ಸರ್ಕಾರಿ ಶಾಳೆಗಳ ಅಭಿವೃದ್ಧಿ ಆಗಲಿ. ಸರ್ಕಾರಿ ಶಾಲೆಗೆ ಬಡಮಕ್ಕಳು ಹೋಗುತ್ತಾರೆ ಎಂದು ಗ್ರಾಮ ವಾಸ್ತವ್ಯದ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಬಳಿಕ ರಾಜ್ಯದ ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲಿ ಎಂದು ಬಿಜೆಪಿ ನಾಯಕ ಈಶ್ವರಪ್ಪ ಹೇಳಿದರು.

ಇನ್ನು ಯಡಿಯೂರಪ್ಪ ಕೂಡ ತಾವು ಕೂಡ ಏನೂ ಕಡಿಮೆ ಇಲ್ಲವೆಂಬಂತೆ, ಕಳೆದ ಹಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದ ಇವರು ಇದೀಗ ಏಕಾಎಕಿ ಮೈಚಳಿ ಬಿಟ್ಟವರಂತೆ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದ ಬರಪೀಡಿತ ಪ್ರದೇಶದಲ್ಲಿ ಪ್ರವಾಸ ಕೈಗೊಂಡು, ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮತ್ತು ಜನರ ಅಹವಾಲು ಆಲಿಸಲಿದ್ದಾರೆ.

Leave a Reply

Your email address will not be published. Required fields are marked *