ರಾಜ್ಯ ರಾಜಕಾರಣದಲ್ಲಿ ಹೈ ಅಲರ್ಟ್ ! 13 ಶಾಸಕರಿಂದ ರಾಜೀನಾಮೆ? ಸಿಎಂ ಅನುಪಸ್ಥಿತಿಯಲ್ಲಿ ಸರ್ಕಾರ ಪತನ ?
ನ್ಯೂಸ್ ಕನ್ನಡ ವರದಿ : ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಯಾರೂ ಊಹಿಸಲೂ ಸಾಧ್ಯವಾಗದ ಹಲವು ಘಟಾನುಘಟಿ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ. ರಾಜೀನಾಮೆ ನೀಡುತ್ತಾರೆಂದು ಊಹಿಸಿಕೊಳ್ಳಲು ಸಾಧ್ಯವಿಲ್ಲದ ಸುಮಾರು 13ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಲು ಸ್ವೀಕರ್ ರಮೇಶ್ ಕುಮಾರ್ ಕಚೇರಿ ಕಡೆ ಹೊರಟಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಭಾರೀ ಸದ್ದು ಮಾಡಿದ್ದ IMA ಕ್ರಿಮಿನಲ್ ಕೇಸ್ ಇದಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.
ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗಳು ನಡೆಯಲಾರಂಭಿಸಿವೆ. ಕಾಂಗ್ರೆಸ್ ಸಚಿವ ಶಾಮೀಲಾದ IMA ಕ್ರಿಮಿನಲ್ ಕೇಸ್ ತನಿಖೆ ಚುರುಕುಗೊಳ್ಳುತ್ತಿದ್ದಂತೆಯೇ, ಸರಹೊತ್ತಿನ ಸರಣಿ ಸಭೆ ನಡೆಸಿ ಮುಂದಿನ ಕಾರ್ಯತಂತ್ರ ನಡೆಸಿದ್ದಾರೆ. ಇದುವರೆಗೂ ಕಾಣಿಸಿಕೊಳ್ಳದ ಶಾಸಕರು ಈ ಸಭೆಯಲ್ಲಿ ಅಸಮಾಧಾನ ಹೊರಹಾಕಿ ರಾಜೀನಾಮೆ ನೀಡಲು ಸಿದ್ದರಾಗಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ವಾಪಾಸಾಗುವಷ್ಟರಲ್ಲಿ ಸರ್ಕಾರ ಪತನವಾಗುತ್ತಾ ಎಂಬ ಅನುಮಾನಗಳು ಗರಿಗೆದರಿವೆ.