ಕಾನೂನುಬದ್ಧವಾಗಿ ಕೆಲಸ ಮಾಡಿ : ಸ್ಪೀಕರ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ !

ನ್ಯೂಸ್ ಕನ್ನಡ ವರದಿ : ಅತೃಪ್ತ ಶಾಸಕರ ರಾಜಿನಾಮೆ ಅಂಗಿಕಾರವಾಗುತ್ತೆಯೇ, ಇಲ್ಲವೇ ಎಂಬ ಕುತೂಹಲಕ್ಕೆ ಬ್ರೇಕ್ ಹಾಕಿ, ರಾಜೀನಾಮೆಗೆ ಸೂಕ್ತ ಕಾರಣ ಕೇಳಲು ಅತೃಪ್ತರನ್ನು ಆಹ್ವಾನಿಸಿದ್ದು, ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಯಡಿಯೂರಪ್ಪ ಕಿಡಿ ಕಾರಿದ್ದು, ರಮೇಶ್ ಕುಮಾರ್ ಅವರು ಈಗಲಾದರೂ ಕಾನೂನುಬದ್ಧವಾಗಿ ಕೆಲಸ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾಕೀತು ಮಾಡಿದ್ದಾರೆ. ರಾಜ್ಯದ ಮೈತ್ರಿ ಸರ್ಕಾರ ತಾಂತ್ರಿಕವಾಗಿ ಬಹುಮತ ಕಳೆದುಕೊಂಡಿರುವ ಪರಿಣಾಮ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯ 105 ಶಾಸಕರು ವಿಧಾನಸೌಧದ ಗಾಂಧಿ ಚೌಕದ ಎದುರು ಧರಣಿ ನಡೆಸುತ್ತಿದ್ದಾರೆ.

ಎಲ್ಲಾ ಪಕ್ಷದವರೂ ಸರ್ವಾನುಮತದಿಂದ ಕೆ.ಆರ್. ರಮೇಶ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದೇವೆ. ಆದರೆ, ಅವರು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕ್ರಮಬದ್ಧವಲ್ಲದ ರಾಜೀನಾಮೆ ನೀಡಿದವರು ಮತ್ತೊಮ್ಮೆ ಬಂದು ಸರಿಯಾದ ಮಾದರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಾರೆ. ಆದರೆ, ರಾಜೀನಾಮೆಗಳು ಕ್ರಮಬದ್ಧವಾಗಿದೆ ಎಂದು ಅವರೇ ಹೇಳಿರುವ ರಾಜೀನಾಮೆಗಳನ್ನಾದರೂ ಕೂಡಲೇ ಕಾನೂನು ಬದ್ಧಬವಾಗಿ ಅಂಗೀಕಾರ ಮಾಡಲಿ ಎಂದು ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *