ರಾಜ್ಯದಲ್ಲಿ ಆಪರೇಷನ್ ಕಮಲ: ಲೋಕಸಭೆಯಲ್ಲಿ ಬಿಜೆಪಿ ವಿರುದ್ಧದ ಕಾಂಗ್ರೆಸ್ ಘೋಷಣೆ !

ನ್ಯೂಸ್ ಕನ್ನಡ ವರದಿ : ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರದಲ್ಲಿಯೂ ಕೂಡ ಈ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ಮಂಗಳವಾರದಂದು ಲೋಕಸಭೆಯಲ್ಲಿ ಕಾಂಗ್ರೆಸ ಸದನದ ನಾಯಕ ಅಧಿರ್ ರಂಜನ್ ಚೌಧರಿ ಪ್ರಸ್ತಾಪಿಸಿದರು.ಇದೇ ವೇಳೆ ಇದಕ್ಕೆ ಸಹಮತ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೂಡ ಸಾಥ್ ನೀಡಿದರು. ಇದೇ ವೇಳೆ ಡಿಎಂಕೆ ಸದಸ್ಯರು ಕೂಡ ಸಾಥ್ ನೀಡಿದರು. ಬಿಜೆಪಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಆಪರೇಶನ್ ಗೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸದನದಲ್ಲಿ ಸದಸ್ಯರು ತನಶಾಹಿ ಬಂದ್ ಕರೋ, ಶಿಕರ್ ರಾಜನೀತಿ ಬಂದ್ ಕರೋ, ಬಂದ್ ಕರೋ (ಸರ್ವಾಧಿಕಾರಕ್ಕೆ ಧಿಕ್ಕಾರ, ಬೇಟೆ ರಾಜಕಾರಣ ನಿಲ್ಲಿಸಿ) ಎಂದು ಘೋಷಣೆ ಕೂಗಿದರು. ನಂತರ ಕಾಂಗ್ರೆಸ್ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಸದನದಿಂದ ಹೊರ ನಡೆದರು. ಆದರೆ ಸ್ಪೀಕರ್ ಓಂ ಬಿರ್ಲಾ ಕಾಂಗ್ರೆಸ್ ನಾಯಕರ ಘೋಷಣೆಗೆ ಆಕ್ಷೇಪ ವ್ಯಕ್ತಪಡಿಸಿ, ಈ ವಿಚಾರ ಕುರಿತಾಗಿ ರಾಜ್ ನಾಥ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *