ಡಿಕೆ ಶಿವಕುಮಾರ್ ರನ್ನು ಅರೆಸ್ಟ್ ಮಾಡಿದ ಮುಂಬೈ ಪೋಲೀಸರು!

ನ್ಯೂಸ್ ಕನ್ನಡ ವರದಿ: ಮಳೆ ಬಂದರೂ ಕೊಡೆ ಹಿಡಿದುಕೊಂಡೇ ಸಚಿವ ಡಿ.ಕೆ ಶಿವಕುಮಾರ್ ಅವರು ಮುಂಬೈನ ರೆನೈಸನ್ಸ್ ಹೋಟೆಲ್ ಮುಂಭಾಗ ಪಟ್ಟು ಬಿಡದೆ ಕುಳಿತು ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದು, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲದೇ ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದಿದ್ದ ಡಿಕೆ ಶಿವಕುಮಾರ್ ಅವರನ್ನು ಮುಂಬೈ ಪೋಲೀಸರು ಬಂಧಿಸಿದ್ದಾರೆ.

ಹೋಟೆಲ್ ಮಾಲಕರ ದೂರು ,ಹೋಟೇಲ್ ವ್ಯಾಪ್ತಿಯ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೆ ತಂದು, ಶಾಂತಿ ಕಾಪಾಡುವ ನೆಪದಲ್ಲಿ ಡಿಕೆಶಿಯನ್ನು ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *