ನಾನು ರಾಜೀನಾಮೆ ಕೊಡಲ್ಲ!: ಸಿಎಂ ಕುಮಾರಸ್ವಾಮಿ ಖಡಕ್ಕಾಗಿ ಹೇಳಲು ಕಾರಣವೇನು ಗೊತ್ತೇ?
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಉಂಟಾಗುತ್ತಿರುವ ತೀವ್ರ ರಾಜಕೀಯ ಬೆಳವಣಿಗೆಗಳ ಸಂಬಂಧಿಸಿದಂತೆ ಎಲ್ಲಾ ಮಾಧ್ಯಮಗಳು ನಿನ್ನೆ ರಾತ್ರಿಯಿಂದಲೂ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದೇ ಸುದ್ದಿ ಪ್ರಸಾರ ಮಾಡುತ್ತಿದ್ದವು.
ಅದೇ ರೀತಿ ಇಂದು ಬೆಳಿಗ್ಗೆ ಕೆಕೆ ಗೆಸ್ಟ್ ಹೌಸ್ ನಲ್ಲಿ ನಡೆದ ಮೀಟಿಂಗ್ ಮುಗಿಸಿ ಹೊರಬಂದಾಗ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ನಾನು ಏಕೆ ರಾಜೀನಾಮೆ ಕೊಡಬೇಕು? ನಿಮಗೆ 2008 -2009 ರ ಸಮಯದಲ್ಲಿ ಯಡಿಯುರಪ್ಪ ಮುಖ್ಯಮಂತ್ರಿ ಇದ್ದಾಗ ಆದ ಘಟನೆ ನೆನಪಿಲ್ಲವೇ? ಆಗ ಎಷ್ಟು ಜನ ರಾಜೀನಾಮೆ ಕೊಟ್ಟಿದ್ದರು? ಆಗ ಏನು ಕ್ರಮ ಕೈಗೊಳ್ಳಲಾಗಿತ್ತು? ನೆನಪಿದೆ ತಾನೇ? ನಾನು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣ ವಾಗಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಮೂಲಕ ಮೈತ್ರಿ ಸರ್ಕಾರವನ್ನು ಉಳಿಸಲು ಬೇಕಾದ ಎಲ್ಲಾ ಕಸರತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಮಾಡಲಿದ್ದಾರೆ ಎಂಬ ಪರೋಕ್ಷ ಸಂದೇಶ ನೀಡಿದ್ದಾರೆ.