ಅತೃಪ್ತ ಶಾಸಕರನ್ನು ಬಿಜೆಪಿಗೆ ಸೇರಿಸದಂತೆ ಬಿಜೆಪಿಯಲ್ಲೇ ವಿರೋಧ! ಶುರುವಾಯಿತು ಯಡ್ಡಿಗೆ ತಲೆಬಿಸಿ

ನ್ಯೂಸ್ ಕನ್ನಡ ವರದಿ:- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹಾಲಕ್ಷ್ಮಿಲೇಔಟ್‍ನ ಗೋಪಾಲಯ್ಯ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದೆಂದು ರಾಜ್ಯಾಧ್ಯಕ್ಷ ಬಿ.ಎಸ್‍ಯಡಿಯೂರಪ್ಪನವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್ ನೇತೃತ್ವದಲ್ಲಿ ಆಗಮಿಸಿದ ಮಹಾಲಕ್ಷ್ಮಿಲೇಔಟ್‍ನ 50ಕ್ಕೂ ಹೆಚ್ಚು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗೋಪಾಲಯ್ಯ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದೆಂದು ಒತ್ತಾಯಿಸಿದ್ದಾರೆ.

ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ದೂರು ನೀಡಿದ ಎಸ್.ಹರೀಶ್ ಅವರು ಒಂದು ವೇಳೆ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ಅವರು ಗೋಪಾಲಯ್ಯ ನೀಡಿರುವ ರಾಜೀನಾಮೆಯನ್ನು ಅಂಗೀಕಾರ ಮಾಡಿದರೆ ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತದೆ. ಈವರೆಗೂ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾರ್ಯಕರ್ತರ ವಿರುದ್ಧ ಗೋಪಲಯ್ಯ ಸಾಕಷ್ಟು ಕಿರುಕುಳ ನೀಡಿದ್ದಾರೆ. ಕೇವಲ ರಾಜಕೀಯದ ಭವಿಷ್ಯಕ್ಕಾಗಿ ಅವರು ಪಕ್ಷಕ್ಕೆ ಬರುತ್ತಿದ್ದಾರೆ.

ಉಪಚುನಾವಣೆಯಲ್ಲಿ ನಾವು ಅವರನ್ನು ಹೇಗೆ ಬೆಂಬಲಿಸಬೇಕು. ಮಂತ್ರಿ ಸ್ಥಾನದ ಆಸೆಗಾಗಿ ಪಕ್ಷಕ್ಕೆ ಬರುವವರನ್ನು ಸೇರ್ಪಡೆ ಮಾಡಿಕೊಂಡರೆ ನಮ್ಮ ರಾಜಕೀಯ ಭವಿಷ್ಯವೇನು ಎಂದು ಬಿಎಸ್‍ವೈಗೆ ಪ್ರಶ್ನೆ ಮಾಡಿದರು.

Leave a Reply

Your email address will not be published. Required fields are marked *