ಬ್ರೇಕಿಂಗ್ ನ್ಯೂಸ್: ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ವಾಪಾಸ್? ಯಾರವರು ಗೊತ್ತೇ?
ನ್ಯೂಸ್ ಕನ್ನಡ ವರದಿ : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದ್ದು, ರಾಜೀನಾಮೆ ಪ್ರಹಸನದ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಪ್ರತ್ಯೇಕ ಸಭೆ ನಡೆಸಿದ್ದರು.
ಈ ಸಭೆ ನಿಮ್ಮಿತ್ತ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ತಮ್ಮ ಈ ಉದ್ದೇಶ ಸಾಧನೆಯಲ್ಲಿ ಬಹುತೇಕ ಯಶಸ್ವಿಯಾಗಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹಾಗೂ ರೋಷನ್ ಬೇಗ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದು ಬಂದಿದೆ.
ಗುಲಾಂ ನಬಿ ಆಜಾದ್ ಅವರ ಮನವೊಲಿಕೆ ಪರಿಣಾಮವಾಗಿ ರಾಮಲಿಂಗಾರೆಡ್ಡಿ ಹಾಗೂ ಬೇಗ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ವಲಯಗಳು ನಂಬಿವೆ. ಈ ಮನವೊಲಿಕೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಗುಲಾಂ ನಬಿ ಆಜಾದ್ ಅವರು ಗುರುವಾರ ಸಂಜೆ ದೆಹಲಿಗೆ ಹಿಂತಿರುಗಿದ್ದು, ಶನಿವಾರ ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜೀನಾಮೆ ನೀಡಲು ಮುಂದಾಗಿದ್ದ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅವರು ತಮ್ಮ ನಿರ್ಧಾರ ಹಿಂಪಡೆದಿದ್ದು, ಶುಕ್ರವಾರ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬೇಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಅವರು ಕೆಪಿಸಿಸಿ ಅಧ್ಯಕ್ಷರಿಗೂ ಸೂಚಿಸಿದ್ದು, ಶೀಘ್ರವೇ ಕೆಪಿಸಿಸಿ ಅಮಾನತು ಆದೇಶವನ್ನು ಹಿಂಪಡೆಯಲಿದೆ ಎನ್ನಲಾಗಿದೆ.