ದೇಶದ ರೈತರ ಪ್ರಸ್ತುತ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರ ಕಾರಣ : ರಾಜನಾಥ್ ಸಿಂಗ್ ಆರೋಪ !

ನ್ಯೂಸ್ ಕನ್ನಡ ವರದಿ : ರೈತರ ಇಂದಿನ ಪರಿಸ್ಥಿತಿಗೆ ಇದು ಕೇವಲ ನಾಲ್ಕೈದು ವರ್ಷಗಳು ಅಧಿಕಾರ ನಡೆಸಿರುವ ಬಿಜೆಪಿ ಸರ್ಕಾರ ಕಾರಣವಲ್ಲ. ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿದ್ದ ಸರ್ಕಾರ ರೈತರ ಇಂದಿನ ಈ ದುಸ್ಥಿತಿಗೆ ಕಾರಣ. ಕಳೆದ ಐದು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜನಾಥ್ ಸಿಂಗ್ ವಾಗ್ಧಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರೈತರ ‘ಬವಣೆ’ ಬಗ್ಗೆ ಕೇಂದ್ರ ಸರ್ಕಾರವನ್ನು ದೂಷಿಸಿದರು. ರಾಹುಲ್ ಗಾಂಧಿಯವರ ಆರೋಪಗಳನ್ನು ನಿರಾಕರಿಸಿದ ರಾಜನಾಥ್ ಸಿಂಗ್, ಹಿಂದಿನ ಸರ್ಕಾರಗಳಲ್ಲಿ ಹೆಚ್ಚು ರೈತರ ಆತ್ಮಹತ್ಯೆಗಳು ನಡೆದಿವೆ. ಕಳೆದ ಐದು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಆದಾಯವನ್ನು ದ್ವಿಗುಣಗೊಳಿಸಲು ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ರೈತರ ಸ್ಥಿತಿ ಸುಧಾರಿಸಿದೆ. ಮೋದಿ ಸರ್ಕಾರವು ಹೆಚ್ಚಿಸಿದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯನ್ನು ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದಿನ ಯಾವುದೇ ಸರ್ಕಾರಗಳು ಹೆಚ್ಚಿಸಿಲ್ಲ ಎಂದು ನಾನು ದೃಢವಾಗಿ ಹೇಳುತ್ತೇನೆ ಎಂದು ಸಿಂಗ್ ತಿಳಿಸಿದರು.

Leave a Reply

Your email address will not be published. Required fields are marked *