ಬಿಜೆಪಿ ಹಾಗೂ ಆರ್ಎಸ್ಎಸ್ ಗೆ ಧನ್ಯವಾದ ಸಲ್ಲಿಸಿದ ರಾಹುಲ್ ಗಾಂಧಿ! ಕಾರಣವೇನು ಗೊತ್ತೇ?
ನ್ಯೂಸ್ ಕನ್ನಡ ವರದಿ : ನೋಟು ಅಮಾನ್ಯೀಕರಣ ವೇಳೆ ಅಹಮದಾಬಾದ್ ಜಿಲ್ಲಾ ಸಹಕಾರ ಬ್ಯಾಂಕ್ ಕೇವಲ ಐದು ದಿನಗಳಲ್ಲಿ 750 ಕೋಟಿ ರೂ. ಮೌಲ್ಯದ ನಿಷೇಧಿತ ನೋಟುಗಳನ್ನು ವಿನಿಮಯ ಮಾಡಿಕೊಡುವ ಮೂಲಕ ಹಗರಣದಲ್ಲಿ ಭಾಗಿಯಾಗಿದೆ ಎಂದು ರಾಹುಲ್ ಆರೋಪಿಸಿದ್ದರು. ಈ ಹಿನ್ನಲೆ ಬ್ಯಾಂಕ್ ಅಧ್ಯಕ್ಷ ಅಜಯ್ ಪಟೇಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿವೆ. ಈ ಹಿನ್ನೆಲೆ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಬಹಿರಂಗ ಹೋರಾಟ ನಡೆಸಲು ‘ವೇದಿಕೆ ಮತ್ತು ಅವಕಾಶ’ ಕಲ್ಪಿಸಿಕೊಟ್ಟಿರುವುದಕ್ಕಾಗಿ ಆ ಸಂಘಟನೆಗಳ ಪ್ರಮುಖರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಸಲ್ಲಿಸಿದ್ದಾರೆ.
ಬಿಜೆಪಿ ಹಾಗೂ ಅದರ ಸೈದ್ಧಾಂತಿಕ ಮಾರ್ಗದರ್ಶಕ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬಹಿರಂಗ ಹೋರಾಟ ನಡೆಸಲು ವೇದಿಕೆ ಮತ್ತು ಅವಕಾಶ ಕಲ್ಪಿಸಿದ ಆ ಸಂಘಟನೆಗಳ ನಾಯಕರಿಗೆ ಧನ್ಯವಾದಗಳು. ಸತ್ಯಮೇವ ಜಯತೆ,” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಮಾನನಷ್ಟ ಮೊಕದ್ದಮೆಗಳ ಜಾಮೀನು ಮಂಜೂರು ಪಡೆದ ರಾಹುಲ್ ಗಾಂಧಿ ಮತ್ತೊಂದು ಮಾನನಷ್ಟ ಮೊಕದ್ದಮೆಯ ವಿಚಾರಣೆ ಎದುರಿಸಲು ನಾನು ಅಹಮದಾಬಾದ್ನಲ್ಲಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದರಿಂದ ಹಂಗಾಮಿ ಅಧ್ಯಕ್ಷರ ಆಯ್ಕೆಯಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ.