ದೇವರ ಆಶಿರ್ವಾದದಿಂದ ನಾನು ಆರೋಗ್ಯವಾಗಿದ್ದೇನೆ!: ವದಂತಿಗೆ ಸ್ಪಷ್ಟನೆ ನೀಡಿದ ದ್ವಾರಕೀಶ್
ನ್ಯೂಸ್ ಕನ್ನಡ ವರದಿ: ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿರುವ ವದಂತಿಯಿಂದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ದ್ವಾರಕೀಶ್ ವೀಡಿಯೊ ಮಾಡಿದ್ದು ದಯವಿಟ್ಟು ವದಂತಿಗಳನ್ನು ನಂಬಬೇಡಿ ಎಂದಿದ್ದಾರೆ.
ದ್ವಾರಕೀಶ್ ಅವರಿಗೆ ಏನೂ ಆಗಿಲ್ಲ. ದೇವರ ದಯೆಯಿಂದ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಯಾರೂ ಇಂತಹ ಸುದ್ದಿಗಳನ್ನು ನಂಬಬಾರದು ಎಂದಿದ್ದಾರೆ. ಸ್ವತಃ ದ್ವಾರಕೀಶ್ ಅವರೇ, ನಾನಿನ್ನೂ ಬದುಕಿದ್ದೇನೆ. ಆರೋಗ್ಯವಾಗಿದ್ದೇನೆ’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
Dwarakish sir is fine. God bless. Please don't entertain any rumors about his condition.
— Chaitanya KM (@kmchaitanya) July 15, 2019
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ದ್ವಾರಕೀಶ್ ಆಪ್ತ ಚೈತನ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ನೀ ಬರೆದ ಕಾದಂಬರಿ ಇವರ ನಿರ್ದೇಶನದ ಮೊದಲ ಚಿತ್ರ. ಸಿಂಗಾಪುರದಲ್ಲಿ ರಾಜಾ ಕುಳ್ಳ ಸಿನಿಮಾದಲ್ಲಿ ವಿಷ್ಣುವರ್ಧನ್ ಜೊತೆ ಅಭಿನಯಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಈ ಸಿನಿಮಾ ಸಿಕ್ಕಾಪಟ್ಟೆ ಫೇಮಸ್. ಗುರು ಶಿಷ್ಯರು, ಪ್ರಚಂಡ ಕುಳ್ಳ, ಮಾತು ತಪ್ಪದ ಮಗ, ಆಟೋ ರಾಜಾ. ಸಿಂಹದ ಮರಿ ಸೈನ್ಯ ಸೇರಿದಂತೆ 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 50 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.