ಐಪಿಎಲ್ ಇತಿಹಾಸದ ಅತ್ಯಂತ ವೇಗದ ಅರ್ಧಶತಕ ಸಿಡಿಸಿದ ಕನ್ನಡಿಗ ಕೆ.ಎಲ್ ರಾಹುಲ್!

ನ್ಯೂಸ್ ಕನ್ನಡ ವರದಿ: ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಮೆಂಟ್ ಎಂದೇ ಹೆಸರುವಾಸಿಯಾದ ಐಪಿಎಲ್ ನಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಿಟ್ಟು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಸೇರ್ಪಡೆಯಾಗಿದ್ದ ಕನ್ನಡಿಗ ಕೆ.ಎಲ್ ರಾಹುಲ್ ಇಂದು ಮೊಹಾಲಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ ನಡೆದ ಲೀಗ್ ನ ಮೊದಲ ಪಂದ್ಯದಲ್ಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಪಂಜಾಬ್ ತಂಡಕ್ಕೆ ಭರ್ಜರಿಯಾಗಿ ಎಂಟ್ರಿ ನೀಡಿದ್ದಾರೆ.

ಪಂಜಾಬ್ ಪರವಾಗಿ ಆಡಿರುವ ಪ್ರಥಮ ಪಂದ್ಯದಲ್ಲೇ ಹೊಸ ದಾಖಲೆ ಬರೆದಿರುವ ಕೆ.ಎಲ್ ರಾಹುಲ್ ಐಪಿಎಲ್ ಇತಿಹಾಸದ ಅತ್ಯಂತ ವೇಗದ ಅರ್ಧಶತಕ ಸಿಡಿಸಿದ್ದಾರೆ. ಈ ಹಿಂದೆ ಯೂಸುಫ್ ಪಠಾಣ್ 15 ಎಸೆತಗಳಲ್ಲಿ ಸಿಡಿಸಿದ್ದ ದಾಖಲೆಯನ್ನು ಮುರಿದ ಕೆ.ಎಲ್ ರಾಹುಲ್ 14 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಗಳ ನೆರವಿನಿಂದ ಅರ್ಧಶತಕ ಪೂರ್ತಿಗೊಳಿಸಿದರು.

Leave a Reply

Your email address will not be published. Required fields are marked *