Big Twist ನಾಳೆ ಸದನದಲ್ಲಿ ಭಾಗವಹಿಸುವ ಬಗ್ಗೆ ರಾಮಲಿಂಗ ರೆಡ್ಡಿ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ:- ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ನಾಳೆ ಸದನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಲ ಕಾರಣಗಳಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಹಿಂಪಡೆಯುವುದು ಅಥವಾ ಪಡೆಯದಿರುವ ಬಗ್ಗೆ ಸ್ಪೀಕರ್ ಕರೆದಿರುವ ವಿಚಾರಣೆ ವೇಳೆ ಸ್ಪಷ್ಟವಾಗಿ ನನ್ನ ಅಭಿಪ್ರಾಯ ಹೇಳುತ್ತೇನೆ.

ರಾಜಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ ಈಗಾಗಲೇ ತಿಳಿಸಿದ್ದೇನೆ ಎಂದರು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಪಕ್ಷದ ಬಗ್ಗೆಯಾಗಲಿ, ಸಮ್ಮಿಶ್ರ ಸರ್ಕಾರದ ವಿರುದ್ಧವಾಗಲಿ ವ್ಯತಿರಿಕ್ತ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *