ಬಿಜೆಪಿ ಶಾಸಕನಿಂದ ಅತ್ಯಾಚಾರ ಆರೋಪ: ಆದಿತ್ಯನಾಥ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!
ನ್ಯೂಸ್ ಕನ್ನಡ ವರದಿ-(08.04.18): ಬಿಜೆಪಿ ಶಾಸಕ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವಾಸದ ಮುಂದೆದೆ ಮಹಿಳೆಯೋರ್ವಳು ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ ಘಟನೆಯು ರವಿವಾರ ಬೆಳಗ್ಗೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ನನ್ನ ಮೇಲೆ ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಆತನ ಕೆಲವು ಸಹಚರರು ಅತ್ಯಾಚಾರವೆಸಗಿದ್ದಾರೆ ಎಂದ ಈ ವೇಳೆ ಮಹಿಳೆಯು ಆರೋಪಿಸಿದ್ದಾರೆ.
ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಆತನ ಸಹಚರರು ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಕುರಿತಾದಂತೆ ದೂರು ನೀಡಲು ನಾನು ಹಲವು ಪೊಲೀಸ್ ಠಾಣೆಗಳಿಗೆ ಅಲೆದಾಡಿದ್ದೇನೆ. ಆದರೆ ಯಾವುದೇ ಪೊಲೀಸ್ ಠಾಣೆಗಳಲ್ಲೂ ಈ ಕುರಿತಾದಂತೆ ದೂರು ಸ್ವೀಕರಿಸಲಿಲ್ಲ. ಯಾರು ಕೂಡಾ ನಾನು ಹೇಳುವುದನ್ನು ಕೇಳಿಸಿಕೊಳ್ಳುತ್ತಿಲ್ಲ. ನನಗೆ ಯಾವುದೇ ಭರವಸೆ ಸಿಗದ ಕಾರಣ ನಾನು ಈ ಕಾರ್ಯಕ್ಕೆ ಮುಂದಾಗಿದ್ದೇನೆ. ಕೂಡಲೇ ನನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಬಂಧಿಸಬೇಕು ಎಂದು ಮಹಿಳೆ ಆಗ್ರಹಿಸಿದ್ದಾರೆ.