ಬಿಜೆಪಿಯ ಭಿನ್ನಮತ ಸ್ಫೋಟ, ಡಿಸಿಎಂ ಸ್ಥಾನಕ್ಕೆ ಈಗಲೇ ಶುರುವಾಯ್ತು ಕಿತ್ತಾಟ! ಸಂಪೂರ್ಣ ಮಾಹಿತಿ ಓದಿ

ನ್ಯೂಸ್ ಕನ್ನಡ ವರದಿ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಕೆಡವಿ ಅಧಿಕಾರ ಪಡೆಯಲು ಯತ್ನಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೂ, ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ತುದಿಗಾಲಿನಲ್ಲಿ ನಿಂತಿರುವ ಯಡಿಯುರಪ್ಪ ಅವರಿಗೂ ಈಗಲೇ ಸಂಕಟ ಶುರುವಾಗಿದೆ. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಗೊಂಡಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಮೊದಲೇ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದ ಹಿರಿಯ ಮುಖಂಡರ ಮಧ್ಯೆ ಕಿತ್ತಾಟ ನಡೆದಿದ್ದು, ಬಿಜೆಪಿ ಹಿರಿಯ ಮುಖಂಡರಾದ ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೆ.ಎಸ್.ಈಶ್ವರಪ್ಪ ಮಧ್ಯೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ರೆಸಾರ್ಟ್‌ನಲ್ಲಿ ಮಾತಿನ ಚಕಮಕಿ ನಡೆದಿದ್ದು, ಮುಖಂಡರ ಬೆಂಬಲಿಗರು ತಮ್ಮವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆಂದು ಎನ್ನಲಾಗಿದ್ದು. ಇದು ಯಡಿಯುರಪ್ಪನವರ ನಿದ್ದೆಗೆಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶ್ರೀರಾಮಲು ಅವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ಯಡಿಯುರಪ್ಪ ಮಾತನಾಡಿದ್ದರು, ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಅರವಿಂದ ಲಿಂಬಾವಳಿ ಅವರನ್ನು ಉಪಮುಖ್ಯಮಂತ್ರಿ ಮಾಡುವ ಭರವಸೆ ನೀಡಿದ್ದು, ಶ್ರೀರಾಮುಲು ಸೇರಿದಂತೆ ಅವರ ಬೆಂಬಲಿಗರನ್ನು ಕೆರಳಿಸಿದೆ. ಯಾವುದೇ ಕಾರಣಕ್ಕೂ ಲಿಂಬಾವಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ, ತಮಗೆ ನೀಡಬೇಕು ಎಂದು ಶ್ರೀರಾಮುಲು ಆಗ್ರಹಿಸಿದ್ದಾರೆಂದು ತಿಳಿದು ಬಂದಿದೆ. ಇದು ಅಧಿಕಾರಕ್ಕೆ ಮೊದಲೇ ಶುರುವಾದ ಭಿನ್ನಮತ ಎಲ್ಲಿಗೆ ತಲುಪಿ ನಿಲ್ಲಲಿದೆ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *