ಇಂದು ಕುಮಾರಸ್ವಾಮಿ ಸರ್ಕಾರದ ಪರವಾಗಿ ಮತಚಲಾಯಿಸುತ್ತೇನೆ ಎಂದ ಅತೃಪ್ತ ಶಾಸಕ ಯಾರು ಗೊತ್ತೇ?

ನ್ಯೂಸ್ ಕನ್ನಡ ವರದಿ: ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ನಾಳೆ ಸದನಕ್ಕೆ ಹಾಜರಾಗುತ್ತೇನೆ, ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪರವಾಗಿ ವಿಶ್ವಾಸಮತ ಚಲಾಯಿಸುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಬೇರೆ ರಾಜಕಾರಣವನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ ಈಗಾಗಲೇ ತಿಳಿಸಿದ್ದೇನೆ ಎಂದರು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಪಕ್ಷದ ಬಗ್ಗೆಯಾಗಲಿ, ಸಮ್ಮಿಶ್ರ ಸರ್ಕಾರದ ವಿರುದ್ಧವಾಗಲಿ ವ್ಯತಿರಿಕ್ತ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ರಾಮಲಿಂಗರೆಡ್ಡಿ ಯವರ ಈ ನಿರ್ಣಯ ಬೆಂಗಳೂರಿನ ಬಾಕಿ ಮೂವರು ಶಾಸಕರಾದ ಸೋಮಶೇಖರ್, ಬಸವರಾಜ್ ಹಾಗೂ ಮುನಿರತ್ನ ಅವರ ನಿರ್ಧಾರ ಬದಲಾಯಿಸುತ್ತದೆಯೇ ಕಾದು ಎಂಬ ಕುತೂಹಲ ಕೆರಳಿಸಿದೆ.

Leave a Reply

Your email address will not be published. Required fields are marked *