ಕೊನೆಕ್ಷಣದಲ್ಲಿ ಮೈತ್ರಿ ಸರ್ಕಾರ ಉಳಿಸಲು ದೇವೇಗೌಡರು ಮಾಡಿರುವ ಮಾಸ್ಟರ್ ಪ್ಲಾನ್ ಏನು ಗೊತ್ತೇ?

ನ್ಯೂಸ್ ಕನ್ನಡ ವರದಿ : ಸುಪ್ರೀಂಕೋರ್ಟ್, ಅಧಿವೇಶನದಲ್ಲಿ ಶಾಸಕರು ಭಾಗವಹಿಸುವಂತೆ ಒತ್ತಾಯ ಮಾಡುವಂತಿಲ್ಲ ಎಂದು ತೀರ್ಪು ನೀಡಿದ್ದು, ಶಾಸಕಾಂಗ ಪಕ್ಷ ನೀಡುವ ವಿಪ್‍ನ್ನು ಪಾಲಿಸಲೇ ಬೇಕು ಎಂಬ ಕಟ್ಟಳೆಗೆ ವಿನಾಯಿತಿ ನೀಡಿದೆ. ಅದರ ಹೊರತಾಗಿಯೂ ಕಾಂಗ್ರೆಸ್ ಶಾಸಕಾಂಗ ಪಕ್ಷ ತನ್ನೆಲ್ಲ ಶಾಸಕರಿಗೆ ವಿಪ್ ನೀಡುತ್ತಿದೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಯಾರನ್ನೂ ಬಲವಂತ ಮಾಡದೆ ವಿಪ್ ಜಾರಿಗೊಳಿಸಲು ಪಕ್ಷ ತೀರ್ಮಾನಿಸಿದೆ. ಇನ್ನು ಸರಕಾರ ಉಳಿಸುವ ನಿಟ್ಟಿನಲ್ಲಿ ದೇವೇಗೌಡ ಅವರ ಹೆಜ್ಜೆ ನಿಗೂಢವಾಗಿದ್ದು, ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. ಬುಧವಾರ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಜೊತೆ ದೇವೇಗೌಡ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕಾನೂನಿನ ಹೋರಾಟದಲ್ಲೇ ಸರ್ಕಾರ ಉಳಿಸಿಕೊಳ್ಳಲು ದೇವೇಗೌಡರ ರಣತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಹುಮತದ ಚರ್ಚೆಯನ್ನು ಎರಡು ಮೂರು ದಿನ ಎಳೆಯುವುದು. ಈ ವೇಳೆ ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ವಿಪ್ ಗೊಂದಲದ ಬಗ್ಗೆ ನಿವಾರಣೆ ಮಾಡಿಕೊಳ್ಳುವುದು. ಒಂದು ವೇಳೆ ವಿಪ್ ಉಲ್ಲಂಘಿಸಿದ್ದಕ್ಕೆ ಶಾಸಕರನ್ನು ಅನರ್ಹತೆ ಮಾಡಬಹುದು ಎಂದು ತೀರ್ಪು ನೀಡಿದರೆ ಅನರ್ಹತೆ ಅಸ್ತ್ರ ಬಳಸಿ ಕೊನೆ ಕ್ಷಣದಲ್ಲಿ ಸರ್ಕಾರವನ್ನು ರಕ್ಷಿಸಬಹುದು. ಇದಲ್ಲದೇ ಬಹುಮತ ಚರ್ಚೆಯಲ್ಲಿ ಸಿಗಬಹುದಾದ ಸಮಯದಲ್ಲಿ 3-4 ಜನ ಅತೃಪ್ತರನ್ನು ಸಾಧ್ಯವಾದಷ್ಟು ಮನವೊಲಿಸುವುದು.

ಇನ್ನು ಕೊನೆಯದಾಗಿ ಬಹುಮತದ ಚರ್ಚೆ ವೇಳೆ ಸಿಗಬಹುದಾದ ಸಮಯದಲ್ಲಿ ಸಾಧ್ಯವಾದಷ್ಟು ರಿವರ್ಸ್ ಆಪರೇಷನ್ ಮಾಡುವುದಕ್ಕೆ ಪ್ರಯತ್ನ ಮಾಡುವುದು. 3-4 ಜನ ಬಿಜೆಪಿ ಶಾಸಕರನ್ನು ಸೆಳೆದರೂ ಸರ್ಕಾರ ಸೇಫ್ ಆಗುತ್ತದೆ. ಒಂದು ವೇಳೆ ಸರ್ಕಾರ ಉಳಿಸಿಕೊಳ್ಳಲು ಆಗದೇ ಇದ್ದರೆ ಸರ್ಕಾರ ಬಿದ್ದ ನಂತರ ಬಿಜೆಪಿ ವರಿಷ್ಠರ ಜೊತೆ ಮಾತಾಡಿ ಬಿಜೆಪಿ ಬಾಹ್ಯ ಬೆಂಬಲ ನೀಡಿ ಸರ್ಕಾರದ ಭಾಗವಾಗಿ ಪಕ್ಷವನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ ಎನ್ನುವ ಲೆಕ್ಕಾಚಾರವನ್ನು ಹಾಕಿಕೊಂಡಿದ್ದಾರೆ.

Leave a Reply

Your email address will not be published. Required fields are marked *