ಬಿಜೆಪಿಗೆ ತಲೆನೋವು! ಉಪಮುಖ್ಯಮಂತ್ರಿ ಕನಸು ಕಾಣುತ್ತಿರುವ ಆಕಾಂಕ್ಷಿಗಳು ಯಾರೆಲ್ಲ ಗೊತ್ತೇ?

ನ್ಯೂಸ್ ಕನ್ನಡ ವರದಿ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಕೆಡವಿ ಅಧಿಕಾರ ಪಡೆಯಲು ಯತ್ನಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೂ, ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ತುದಿಗಾಲಿನಲ್ಲಿ ನಿಂತಿರುವ ಯಡಿಯುರಪ್ಪ ಅವರಿಗೂ ಈಗಲೇ ಸಂಕಟ ಶುರುವಾಗಿದೆ. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಗೊಂಡಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಮೊದಲೇ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದ ಹಿರಿಯ ಮುಖಂಡರ ಮಧ್ಯೆ ಕಿತ್ತಾಟ ನಡೆದಿದ್ದು, ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬರುತ್ತಿರುವ ರಮೇಶ್ ಜಾರಕಿಹೊಳಿಗೆ ನೀವು ನಿಮ್ಮ ತಂಡದೊಂದಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದರೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂಬ ಭರವಸೆ ನೀಡಿದ್ದರು ಎನ್ನಲಾಗಿದ್ದು, ಅವರು ಮೊದಲ ಆಕಾಂಕ್ಷಿಯಾಗಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಮಧ್ಯೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದು, ಕುರುಬ ಸಮುದಾಯದ ಹಿರಿಯ ನಾಯಕ, ಕಳೆದ ಬಾರಿ ಉಪಮುಖ್ಯಮಂತ್ರಿ ಆಗಿದ್ದೆ, ಈ ಬಾರಿಯೂ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶ್ರೀರಾಮಲು ಅವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ಯಡಿಯುರಪ್ಪ ಮಾತನಾಡಿದ್ದರು, ಹಾಗಾಗಿ ಶ್ರೀರಾಮುಲು ತಮಗೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಅರವಿಂದ ಲಿಂಬಾವಳಿ ಅವರನ್ನು ಉಪಮುಖ್ಯಮಂತ್ರಿ ಮಾಡುವ ಭರವಸೆ ನೀಡಿದ್ದು ಹಾಗಾಗಿ ಅವರೂ ಉಪಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ.

ಇನ್ನು ಬೆಂಗಳೂರಿನ ಬಿಜೆಪಿ ನಾಯಕ ಆರ್ ಅಶೋಕ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದು, ಈ ಹಿಂದೆ ಉಪಮುಖ್ಯಮಂತ್ರಿ ಆಗಿದ್ದು, ಒಕ್ಕಲಿಗ ಸಮುದಾಯಕ್ಕೆ ಪ್ರಾಶಸ್ತ್ಯ ನೀಡಲೇಬೇಕು ಎಂಬ ಲೆಕ್ಕಾಚಾರ ಮುಂದಿಟ್ಟಿದ್ದಾರೆ.

Leave a Reply

Your email address will not be published. Required fields are marked *