ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ?! ಮುಂದೆ ಓದಿ..

ನ್ಯೂಸ್ ಕನ್ನಡ ವರದಿ- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು 7ನೇ ಬಾರಿ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ರಚನೆ ಮಾಡುತ್ತೀರೋ ಅಥವಾ ರಾಷ್ಟ್ರಪತಿ ಆಳ್ವಿಕೆ ಬರುತ್ತದೋ ಕಾದು ನೋಡೋಣ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದರು.

ಅತ್ತ ಕಾಂಗ್ರೆಸಿಗರು ವಿಶ್ವಾಸಮತ ಯಾಚನೆಗೆ ಗಡುವು ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಗೃಹ ಸಚಿವರಿಗೆ ತುರ್ತು ವರದಿ ನೀಡಿದ್ದರು. ತುರ್ತು ವರದಿ ಪರಿಶೀಲನೆ ನಂತ್ರ ಗೃಹ ಸಚಿವರು ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡುವ ಸಾಧ್ಯತೆಯಿದೆ.

ರಾಜ್ಯಪಾಲರು ನೀಡಿದ ವರದಿಯನ್ನು ಗೃಹ ಸಚಿವಾಲಯ ಮೊದಲು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಂತ್ರ ಅಮಿತ್ ಶಾ ನಿರ್ಧಾರ ಕೈಗೊಳ್ಳಲಿದ್ದಾರೆ. ಅಮಿತ್ ಶಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆಂಬ ನೋಡಬೇಕಾಗಿದೆ.

Leave a Reply

Your email address will not be published. Required fields are marked *