ಬಿಜೆಪಿ‌ಗೆ ಮತ್ತೊಂದು ಶಾಕ್ ನೀಡಿದ ದಿನೇಶ್ ಗುಂಡೂರಾವ್! ಮುಂದೆ ಓದಿ..

ನ್ಯೂಸ್ ಕನ್ನಡ ವರದಿ:  ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದ್ದಾರೆ. ತಾಜ್ ವಿವಂತಾ ಹೊಟೇಲ್‍ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 15 ಮಂದಿ ಶಾಸಕರನ್ನು ಮುಂಬೈನಲ್ಲಿ ಕೂಡಿ ಹಾಕಲಾಗಿದೆ.

ಕುದುರೆ ವ್ಯಾಪಾರ ಮಾಡುತ್ತಿರುವುದು ಬಿಜೆಪಿಯವರು ಎಂಬುದು ಎಲ್ಲರಿಗೂ ಗೊತ್ತಿದೆ ರಾಜ್ಯಪಾಲರು ಖುದ್ದು ಬಿಜೆಪಿಯವರಿಗೆ ಪತ್ರ ಬರೆಯಬೇಕಿತ್ತು. ರಾಜ್ಯಪಾಲರು ಬಿಜೆಪಿಯವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸ್ವಾರ್ಥಕ್ಕಾಗಿ ರಾಜಭವನವನ್ನು ಬಳಸಿಕೊಳ್ಳುತ್ತಿದೆ ಎಂದು ಅರೋಪಿಸಿದ್ದಾರೆ.

ಶ್ರೀಮಂತ ಪಾಟೀಲ್ ಅವರು ಬೆಂಗಳೂರಿನಿಂದ ಹೋಗಿ ದಾಖಲಾಗಿರುವ ಮುಂಬೈಯಿನ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸಾ ವಿಭಾಗವೇ ಇಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಇಷ್ಟು ಬೇಗ ಬೇಗ ರಾಜ್ಯಪಾಲರು ಕೆಲಸ ಮಾಡುತ್ತಿರುವ ಹಿಂದಿನ ಮಸಲತ್ತು ಏನು ಎಂಬುದು ರಾಜ್ಯದ ಜನರಿಗೆ ಅರ್ಥ ವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಈಗಾಗಲೆ ಹೋರಾಟ ಆರಂಭಿಸಿದ್ದು. ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಅದನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಜನರು ನಮ್ಮನ್ನು ನೋಡುತ್ತಿದ್ದಾರೆ ಎಂದು ಅವರು ಹೇಳಿದರು.

ವಿಪ್ ಕುರಿತಂತೆ ಸುಪ್ರೀಂಕೋರ್ಟ್ ಆದೇಶ, ಮತ್ತು ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ನಿಗದಿಪಡಿಸಿರುವ ಸಮಯಾವಕಾಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೋಮವಾರ ಅದು ತಿರ್ಮಾನವಾಗಲಿದ್ದು, ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *