ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ನ್ಯೂಸ್ ಕನ್ನಡ ವರದಿ(08-04-2018): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋ ದಲ್ಲಿರುವ ನಿವಾಸದ ಮುಂದೆ ಮಹಿಳೆಯೋರ್ವಳು ತನ್ನ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ನನ್ನ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲು ನಾನು ಹಲವು ಪೊಲೀಸ್ ಠಾಣೆಗಳಿಗೆ ಅಲೆದಿದ್ದೇನೆ. ಯಾರೂ ನನ್ನ ಅಳಲು ಕೇಳುತ್ತಿಲ್ಲ ಮತ್ತು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನ ಮೇಲೆ ಅತ್ಯಾಚಾರ ಎಸಗಿದವರನ್ನು ಈ ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ನಾನು ಇಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಮಹಿಳೆ ಹೇಳಿರುವುದಾಗಿ ಎನ್ಎನ್ಐ ವರದಿ ಮಾಡಿದೆ. ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಆತನ ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆರೋಪಿಸಿದ್ದಾರೆ.

ಈ ಸಂಬಂಧ ನಾನು ಮುಖ್ಯಮಂತ್ರಿಗಳಿಗೂ ಮನವಿ ಮಾಡಿದ್ದೇನೆ. ಆದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.ಮಹಿಳೆ ಇಂದು ಕುಟಂಬ ಸಮೇತ ಸಿಎಂ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *